ಕ್ರೀಡೆ

ಟಿ-20 ವಿಶ್ವಕಪ್‌, ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇಶಾನ್‌ ಕಿಶನ್‌ ಆರಂಭಿಕ ಆಟಗಾರನಾಗಿ ಕಣಕ್ಕಿಳಿಸಿ : ಹರ್ಭಜನ್‌ ಸಿಂಗ್‌ ಸಲಹೆ

ನವದೆಹಲಿ : ಟಿ-20 ವಿಶ್ವಕಪ್‌ನಲ್ಲಿ ಅ.31ರಂದು ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇಶಾನ್‌ ಕಿಶನ್‌ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವಂತೆ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಸಲಹೆ ನೀಡಿದ್ದಾರೆ.

ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಅವರು, ‘ಇಶಾನ್ ಕಿಶನ್ ಅವರು ‘ಪವರ್‌ ಪ್ಲೇ’ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ. ಹಾಗಾಗಿ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವುದು ಸೂಕ್ತ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

‘ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಆಡುವುದು ಅಗತ್ಯವಿದೆ. ಇದು ತಂಡಕ್ಕೆ ಅತಿ ಮುಖ್ಯ ಎಂದು ನಾನು ಭಾವಿಸುತ್ತೇನೆ. ಜತೆಗೆ, ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಆರಂಭಿಕರಾಗಿ ಆಡಬೇಕು. ಈ ಇಬ್ಬರ ಜೊತೆಯಾಟದಿಂದ ಭಾರತಕ್ಕೆ ಉತ್ತಮ ಆರಂಭ ದೊರಯಲಿದೆ. ಕಿಶನ್ ಆರು ಓವರ್‌ಗಳನ್ನು ಆಡಿದರೆ ತಂಡದ ಮೊತ್ತ 60-70 ರನ್‌ ಎಂದು ನಿರೀಕ್ಷಿಸಬಹುದು. ಇಶಾನ್ ಕ್ರೀಸ್‌ನಲ್ಲಿ ಇರುವವರೆಗೂ ಎದುರಾಳಿ ತಂಡದ ಬೌಲರ್ಗಳು ಒತ್ತಡದಲ್ಲಿರುತ್ತಾರೆ’ ಎಂದು ಹರ್ಭಜನ್ ಹೇಳಿದರು.

ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಕೆ.ಎಲ್. ರಾಹುಲ್, 5ನೇ ಕ್ರಮಾಂಕದಲ್ಲಿ ರಿಷಬ್ ಪಂತ್, 6ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡುವುದು ಸೂಕ್ತ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಅ.24ರಂದು ನಡೆದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. ಇದರಿಂದಾಗಿ ಟೀಕೆಗೆ ಗುರಿಯಾಗಿರುವ ಕೊಹ್ಲಿ ಪಡೆಗೆ ನ್ಯೂಜಿಲೆಂಡ್‌ ವಿರುದ್ದದ ಪಂದ್ಯ ನಿರ್ಣಾಯಕವಾಗಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago