ಕ್ರಿಕೆಟ್ : ಟಿ-20 ವಿಶ್ವಕಪ್ ಗೆ ನಾಯಕ ವಿರಾಟ್ ಕೋಹ್ಲಿ ವಿದಾಯ ಘೋಷಿಸಿದ ಬೆನ್ನಲ್ಲೇ ಮುಂದಿನ ನಾಯಕನ ಬಗ್ಗೆ ಚರ್ಚೆ ಆರಂಭವಾಗಿದೆ. ಈ ವೇಳೆ ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಹೆಸರುಗಳು ಕೇಳಿಬರುತ್ತಿವೆ.
ಟಿ-20 ಈಗಾಗಲೇ 5 ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್ ಟಿ20 ತಂಡದ ನಾಯಕನಾಗುವ ಸಾಧ್ಯತೆ ಇದ್ದು, ಇಂಗ್ಲೆಂಡಿನಲ್ಲಿನ ಪಂದ್ಯದ ರೋಚಕತೆಗೆ ಜನರು ಮನಸೋತ್ತಿರುವ ಕೆ.ಎಲ್. ರಾಹುಲ್ ಐಪಿಎಲ್ ಮತ್ತು 50 ಓವರ್ಗಳ ಕ್ರಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರಿಂದ ಅವರನ್ನು ನಾಯಕನ ಸ್ಥಾನಕ್ಕೇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಿ-20 ನಾಯಕತ್ವಕ್ಕೆ ವಿದಾಯ ಹೇಳುವ ಬಗ್ಗೆ ಟ್ವೀಟ್ ನಲ್ಲಿ ಬರೆದುಕೊಂಡಿರುವ ಕೋಹ್ಲಿ, ಇಡೀ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡದ ಏಕದಿನ ಪಂದ್ಯಗಳಿಗೆ ಹೆಚ್ಚಿನ ಗಮನಹರಿಸಲಿದ್ದು, ಅಕ್ಟೋಬರ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯ ಬಳಿಕ ನಾಯಕತ್ವ ತ್ಯಜಿಸುವ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದರು.
ಟಿ-20 ನಾಯಕನಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ನೀಡಿದ ಕೊಡುಗೆಗಳಿಗಾಗಿ ಧನ್ಯವಾದಗಳು ವಿರಾಟ್ ಎಂದು ಸೌರವ್ ಗಂಗೂಲಿ ಧನ್ಯವಾದ ತಿಳಿಸಿದ್ದಾರೆ.