News Karnataka Kannada
Friday, May 10 2024
ಕ್ರೀಡೆ

ಟಿ20 ವಿಶ್ವಕಪ್ ಟೂರ್ನಿ, ನ್ಯೂಜಿಲೆಂಡ್ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿ

Brand Mangalore Friendly Cricket Tournament to be held on Oct 1
Photo Credit :

ಶಾರ್ಜಾ(ನ.05) : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ನ್ಯೂಜಿಲೆಂಡ್ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಮೀಬಿಯಾ ತಂಡ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.

ಈ ಪಂದ್ಯಕ್ಕೆ ಇಲ್ಲಿನ ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಟಿ20 ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ನಿರೀಕ್ಷೆಯಂತೆಯೇ ನಮೀಬಿಯಾ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ತಂಡದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ.

ಸೆಮೀಸ್‌ ಪ್ರವೇಶಿಸುವ ದೃಷ್ಠಿಯಿಂದ ಈ ಪಂದ್ಯದಲ್ಲಿನ ಗೆಲುವು ಕೇನ್‌ ವಿಲಿಯಮ್ಸನ್‌ ನೇತೃತ್ವದ ನ್ಯೂಜಿಲೆಂಡ್ ತಂಡಕ್ಕೆ ಸಾಕಷ್ಟು ಮಹತ್ವದ್ದಾಗಿದೆ. ಸದ್ಯ ಸೂಪರ್ 12 ಹಂತದ ಗ್ರೂಪ್‌ 2ನಲ್ಲಿ ನ್ಯೂಜಿಲೆಂಡ್ ತಂಡವು 3 ಪಂದ್ಯಗಳನ್ನಾಡಿ 2 ಗೆಲುವು ಹಾಗೂ ಒಂದು ಸೋಲು ಸಹಿತ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಕಿವೀಸ್ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಇನ್ನೊಂದೆಡೆ ಗೆಹಾರ್ಡ್‌ ಎರಾಸ್‌ಮಸ್‌ ನೇತೃತ್ವದ ನಮೀಬಿಯಾ ತಂಡವು 3 ಪಂದ್ಯಗಳನ್ನಾಡಿ 1 ಗೆಲುವು ಹಾಗೂ 2 ಸೋಲುಗಳೊಂದಿಗೆ 2 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ನಮೀಬಿಯಾ ತಂಡವು ಸೆಮೀಸ್ ಪ್ರವೇಶಿಸಬೇಕಿದ್ದರೆ ಪವಾಡವೇ ನಡೆಯಬೇಕಿದೆ.

ಇಲ್ಲಿನ ಶಾರ್ಜಾ ಮೈದಾನದಲ್ಲಿ ನಡೆದ ಕಳೆದ 6 ಪಂದ್ಯಗಳ ಪೈಕಿ 5 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವಿನ ನಗೆ ಬೀರಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು