Categories: ಕ್ರೀಡೆ

ಟೀಮ್ ಇಂಡಿಯಾ ಆಟಗಾರ ಇಶಾನ್ ಕಿಶನ್ ತಲೆಗೆ ಏಟು : ಆಸ್ಪತ್ರೆಗೆ ದಾಖಲು

ಧರ್ಮಶಾಲ : ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಅವರ ತಲೆಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಇಂದು ಶ್ರೀಲಂಕಾ ವಿರುದ್ಧ ನಡೆಯಲಿರುವ ಕೊನೆಯ ಟ್ವೆಂಟಿ-20 ಪಂದ್ಯಕ್ಕೆ ಅವರು ಲಭ್ಯರಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಅವರ ಮಿದುಳಿನ ಸ್ಕ್ಯಾನಿಂಗ್ ನಡೆಸಲಾಗಿದ್ದು, ವರದಿ ಇನ್ನಷ್ಟೇ ದೊರೆಯಬೇಕಿದೆ.

ಶ್ರೀಲಂಕಾ ವಿರುದ್ಧದ ಎರಡನೇ ಟ್ವೆಂಟಿ-20 ಪಂದ್ಯ ಧರ್ಮಶಾಲದಲ್ಲಿ ಶನಿವಾರ ನಡೆದಿತ್ತು. ಇಶಾನ್ ಕಿಶನ್ ಅವರು 15 ಎಸೆತ ಎದುರಿಸಿ 16 ರನ್ ಗಳಿಸಿದ್ದರು. ನಾಲ್ಕನೇ ಓವರ್‌ನಲ್ಲಿ ಲಹಿರು ಕುಮಾರ ಅವರ ಬೌನ್ಸರ್ ಎಸೆತವೊಂದು ಇಶಾನ್ ಅವರ ಹೆಲ್ಮೆಟ್‌ಗೆ ಬಡಿದಿತ್ತು. ಕೂಡಲೇ ಅವರು ಹೆಲ್ಮೆಟ್ ತೆಗೆದು ನೋವು ತೋಡಿಕೊಂಡಿದ್ದರು. ಕೂಡಲೇ ಟೀಮ್ ಇಂಡಿಯಾದ ವೈದ್ಯಕೀಯ ತಂಡ ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ಪಂದ್ಯದ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

‘ಇಶಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಿದುಳಿನ ಸ್ಕ್ಯಾನಿಂಗ್‌ಗೆ ಒಳಪಡಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗಿದೆ’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳು ತಿಳಿಸಿವೆ.

ಸ್ಕ್ಯಾನಿಂಗ್ ವರದಿ ದೊರೆತ ಬಳಿಕ ಅವರನ್ನು ತಂಡವಿರುವ ಹೋಟೆಲ್‌ಗೆ ಕರೆದೊಯ್ಯುವ ಸಾಧ್ಯತೆ ಇದೆ.

ಇಂದು (ಭಾನುವಾರ) ನಡೆಯಲಿರುವ ಪಂದ್ಯಕ್ಕೆ ಇಶಾನ್ ಗೈರಾದಲ್ಲಿ ಮಯಂಕ್ ಅಗರ್‌ವಾಲ್ ಅಥವಾ ವೆಂಕಟೇಶ ಅಯ್ಯರ್ ನಾಯಕ ರೋಹಿತ್ ಜತೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಸೂರ್ಯಕುಮಾರ್ ಯಾದವ್, ದೀಪಕ್ ಚಾಹರ್ ಗಾಯದ ಕಾರಣ ಟೂರ್ನಿಯಲ್ಲಿ ತಂಡದಿಂದ ಹೊರಗುಳಿದಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ವಿಶ್ರಾಂತಿಯಲ್ಲಿದ್ದಾರೆ.

ಶ್ರಿಲಂಕಾ ವಿರುದ್ಧ ಶನಿವಾರ ನಡೆದ ಎರಡನೇ ಟ್ವೆಂಟಿ-20 ಪಂದ್ಯವನ್ನು ಟೀಮ್ ಇಂಡಿಯಾ ಏಳು ವಿಕೆಟ್ ಅಂತರದಿಂದ ಗೆದ್ದುಕೊಂಡಿದ್ದು, ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. ರೋಹಿತ್ ಶರ್ಮಾ ಅವರು ಪೂರ್ಣಾವಧಿ ನಾಯಕನಾದ ಬಳಿಕ ಭಾರತವು ಗೆದ್ದುಕೊಂಡ ಮೂರನೇ ಸರಣಿ ಇದಾಗಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago