ನವದೆಹಲಿ: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ.ಬುಧವಾರ ಆಸ್ಟ್ರೇಲಿಯಾ ಓಪನ್ʼನಲ್ಲಿ ಸೋತ ನಂತರ ಅವರಿಂದ ಈ ಹೇಳಿಕೆ ಬಂದಿದೆ.
ಇದು ತನ್ನ ಕೊನೆಯ ಸೀಸನ್ ಎಂದು ಸಾನಿಯಾ ಮಿರ್ಜಾ ಹೇಳಿದ್ದಾರೆ. ಆದ್ರೆ, ಅವಳು ಇಡೀ ಋತುವಿನಲ್ಲಿ ಆಡಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಅನ್ನೋದು ಇನ್ನೂ ಖಚಿತವಾಗಿಲ್ಲ
ಆಸ್ಟ್ರೇಲಿಯನ್ ಓಪನ್ ಗೆ ಆಗಮಿಸಿದ ಸಾನಿಯಾ ಮಿರ್ಜಾ, ಇದು ತನ್ನ ಕೊನೆಯ ಋತು ಎಂದು ಹೇಳಿದ್ದು, ಈ ಮೂಲಕ 2022ರಲ್ಲಿ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪಂದ್ಯದ ನಂತರ ಮಾತನಾಡಿದ ಅವ್ರು, ‘ನಾನು ಉತ್ತಮವಾಗಿ ಆಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಆದ್ರೆ, ಈಗ ದೇಹವು ಅದನ್ನ ಆ ರೀತಿ ಬೆಂಬಲಿಸಲು ಸಾಧ್ಯವಿಲ್ಲ’ ಎಂದು ಮಿರ್ಜಾ ಹೇಳಿದರು. ಇದು ದೊಡ್ಡ ಹಿನ್ನಡೆಯಾಗಿದೆ. ಅಂದ್ಹಾಗೆ, 2003ರಿಂದ ಅಂತಾರಾಷ್ಟ್ರೀಯ ಟೆನಿಸ್ ಆಡುತ್ತಿರುವ ಸಾನಿಯಾ ಮಿರ್ಜಾ ಸುಮಾರು ಎರಡು ದಶಕಗಳ ನಂತರ ಟೆನಿಸ್ ಅಂಗಳದಿಂದ ನಿರ್ಗಮಿಸಲಿದ್ದಾರೆ.