News Karnataka Kannada
Tuesday, April 30 2024
ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಕ್ವಿಂಟನ್ ಡಿ ಕಾಕ್‌!

Di Kok
Photo Credit :

ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋಲುಂಡ ದಕ್ಷಿಣ ಆಫ್ರಿಕಾಗೆ ಮತ್ತೊಂದು ಆಘಾತ ಉಂಟಾಗಿದೆ.    ದ. ಆಫ್ರಿಕಾ ತಂಡದ ಬ್ಯಾಟ್ಸ್‌ ಮನ್‌ ಹಾಗೂ ವಿಕೆಟ್‌ ಕೀಪರ್‌ ಕ್ವಿಂಟನ್ ಡಿ ಕಾಕ್‌ ತಮ್ಮ ಟೆಸ್ಟ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ನಾನು ನಿವೃತ್ತಿ ತೆಗೆದುಕೊಳ್ಳುತ್ತಿರುವ ಬಗೆಗಿನ ನಿರ್ಧಾರ ಸುಲಭವಾದುದ್ದಲ್ಲ. ಈ ಬಗ್ಗೆ ಸಾಕಷ್ಟು ಆಲೋಚನೆ ಮಾಡಿದ್ದೇನೆ. ನನ್ನ ಕುಟುಂಬವನ್ನು ನಾನು ಆದ್ಯತೆಯನ್ನಾಗಿ ತೆಗೆದುಕೊಳ್ಳಬೇಕಿದೆ ಎಂದು ಸ್ಪಷ್ಟಪಡಿಸಿದರು.

ನಾನು ಟೆಸ್ಟ್‌ ಕ್ರಿಕೆಟ್‌ ಅನ್ನು ಪ್ರೀತಿಸುತ್ತೇನೆ, ನನ್ನ ದೇಶವನ್ನು ಪ್ರತಿನಿಧಿಸುವುದನ್ನು ನಾನು ಇಷ್ಟ ಪಡುತ್ತೇನೆ ಎಂದು ಕಾಕ್‌ ಹೇಳಿಕೊಂಡಿದ್ದಾರೆ.

ಕ್ವಿಂಟನ್ ಡಿ ಕಾಕ್‌ ಈವರೆಗೆ 54 ಟೆಸ್ಟ್‌. 124 ಏಕದಿನ, 61 ಟಿ 20 ಪಂದ್ಯಗಳನ್ನು ಆಡುಇದ್ದಾರೆ. ಜತೆಗೆ ಐಪಿಲ್‌ ನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌, ರಾಜಸ್ಥಾನ್‌ ರಾಯಲ್ಸ್‌, ಡೆಲ್ಲಿ ಡೇರ್ ಡೆವಿಲ್ಸ್‌, ಮುಂಬೈ ಇಂಡಿಯನ್ಸ್‌ ಪರವಾಗಿ ಆಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು