ಸೌತಾಂಪ್ಟನ್: ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟಿನಲ್ಲಿ 600 ವಿಕೆಟ್ ಕಬಳಿಸಿದ ಮೊದಲ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಪಾಕಿಸ್ತಾನ ವಿರುದ್ಧ ಇಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ನಲ್ಲಿ ಪಾಕಿಸ್ತಾನದ ನಾಯಕ ಅಜರ್ ಅಲಿ ವಿಕೆಟ್ ಉರುಳಿಸಿದ ಆಂಡರ್ಸನ್ ಈ ಸಾಧನೆ ಮಾಡಿದರು.
ಆಂಡರ್ಸನ್ 156ನೇ ಪಂದ್ಯದಲ್ಲಿ ಈ ಸಾಧನೆ ಮಾಡಿರುವರು. 2003ರಲ್ಲಿ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ್ದ ಆಂಡರ್ಸನ್ ತನ್ನ ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ್ದರು.
ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್(133 ಪಂದ್ಯಗಳಲ್ಲಿ 800 ವಿಕೆಟ್ ), ಆಸ್ಟ್ರೇಲಿಯಾದ ಶೇನ್ ವಾರ್ನ್ 145 ಪಂದ್ಯಗಳಲ್ಲಿ 708 ವಿಕೆಟ್ ಮತ್ತು ಭಾರತದ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್ ಪಡೆದು ಮೊದಲ ಮೂರು ಸ್ಥಾನದಲ್ಲಿರುವರು.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…