News Karnataka Kannada
Tuesday, April 30 2024
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್‌ಗೆ ₹ 12 ಲಕ್ಷ ದಂಡ

Rishabh Pant becomes the first batsman to score a century in ODI cricket
Photo Credit :

ಮುಂಬೈ : ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಭ್‌ ಪಂತ್‌ ಅವರಿಗೆ ದಂಡ ವಿಧಿಸಲಾಗಿದೆ.

ಐಪಿಎಲ್‌ ನೀತಿ ಸಂಹಿತೆ ಪ್ರಕಾರ ಡೆಲ್ಲಿ ತಂಡ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಪಂತ್‌ಗೆ ₹ 12 ಲಕ್ಷ ದಂಡ ಹಾಕಲಾಗಿದೆ. ಇಲ್ಲಿನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡ ನಿಗದಿತ 20 ಓವರ್‌ಗಳಲ್ಲಿ 149 ರನ್ ಗಳಿಸಿತ್ತು. ಲಖನೌ ತಂಡ ಈ ಗುರಿಯನ್ನು ಕೇವಲ ನಾಲ್ಕು ವಿಕೆಟ್‌ ಕಳೆದುಕೊಂಡು ಇನ್ನೂ 2 ಎಸೆತ ಬಾಕಿ ಇರುವಂತೆಯೇ ಮುಟ್ಟಿತು.

ಇದರೊಂದಿಗೆ ಲಖನೌ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಜಯ ಸಾಧಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಮೂರು ಪಂದ್ಯಗಳಿಂದ ಕೇವಲ 1 ಜಯ ಕಂಡಿರುವ ಡೆಲ್ಲಿ ಎರಡು ಪಾಯಿಂಟ್‌ಗಳೊಂದಿಗೆ 7ನೇ ಸ್ಥಾನದಲ್ಲಿದೆ.

ಬುಧವಾರ ರಾತ್ರಿ ನಡೆದ ಕೋಲ್ಕತ್ತ ನೈಟ್‌ ರೈಡರ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ಪಂದ್ಯದ ವೇಳೆಯೂ ಐಪಿಎಲ್‌ ನಿಯಮ ಉಲ್ಲಂಘನೆ ಪ್ರಕರಣ ವರದಿಯಾಗಿತ್ತು. ಕೋಲ್ಕತ್ತದ ನಿತೀಶ್‌ ರಾಣಾ ಅವರಿಗೆ ಪಂದ್ಯದ ಸಂಭಾವನೆಯ ಶೇ 10 ರಷ್ಟು ದಂಡ ಮತ್ತು ಮುಂಬೈ ವೇಗಿ ಜಸ್‌ಪ್ರೀತ್‌ ಬೂಮ್ರಾ ಅವರಿಗೆ ಎಚ್ಚರಿಕೆ ನೀಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು