ನಾಯಕ ಟೆಂಬ ಬವೂಮ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಮತ್ತು ಡೇವಿಡ್ ಮಿಲ್ಲರ್ ಸ್ಫೋಟಕ ಆಟದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
ಶ್ರೀಲಂಕಾ ನೀಡಿದ್ದ 143 ರನ್ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ತಂಡ 19.5 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ತಲುಪಿತು. ಬವೂಮ 46 ಎಸೆತಗಳಲ್ಲಿ 46 ರನ್ ಸಿಡಿಸಿದರೆ, ಡೇವಿಡ್ ಮಿಲ್ಲರ್ 13 ಎಸೆತಗಳಲ್ಲಿ ಅಜೇಯ 23 ರನ್ ಮತ್ತು ರಬಾಡ ಅಜೇಯ 13 ರನ್ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಸೆಮಿಫೈನಲ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 142 ರನ್ಗಳಿಗೆ ಸರ್ವಪತನ ಕಂಡಿತು.