Categories: ಕ್ರೀಡೆ

ನಾವೆಲ್ಲರೂ ಶಮಿ ಬೆನ್ನಿಗೆ ಇದ್ದೇವೆ ಎಂದ ಕೊಹ್ಲಿ : ಧರ್ಮದ ಹೆಸರಿನಲ್ಲಿ ನಿಂದಿಸುವವರಿಗೆ ತಿರುಗೇಟು

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರುವಲ್ಲಿ ವಿಫಲರಾದ ಭಾರತೀಯರ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು. ಅದರಲ್ಲೂ ಶಮಿ ಅವರ ಧರ್ಮದವನ್ನು ಎಳೆದು ತಂದು ಅವರನ್ನು ನಿಂದಿಸಲಾಗಿತ್ತು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ವೇಗಿಯನ್ನು ಪಾಕಿಸ್ತಾನದವ ಎಂದೆಲ್ಲಾ ಟ್ರೋಲ್ ಮಾಡಲಾಗಿತ್ತು. ಈ ಟ್ರೋಲ್​ಗಳಿಗೆ ಇದೀಗ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ನಾಯಕ ವಿರಾಟ್​ ಕೊಹ್ಲಿ, ಧರ್ಮದ ಆಧಾರದ ಮೇಲೆ ವ್ಯಕ್ತಿಯನ್ನು ನಿಂದಿಸುವುದು ಶೋಚನೀಯ ಸಂಗತಿ. ಆ ರೀತಿಯ ಮನಸ್ಥಿತಿಯುಳ್ಳ ಜನರ ಬಗ್ಗೆ ಮಾತನಾಡಿ ನನ್ನ ಒಂದು ನಿಮಿಷವನ್ನು ವ್ಯರ್ಥ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಭಾರತ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಸೂಪರ್​ 12ನಲ್ಲಿ ಎದುರಾಗುತ್ತಿವೆ. ತಮ್ಮ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೋಲು ಕಂಡಿದ್ದು, ಸೆಮಿಫೈನಲ್ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಪಂದ್ಯ ಒಂದು ರೀತಿಯ ಕ್ವಾರ್ಟರ್ ಫೈನಲ್ ಪಂದ್ಯವಾಗಲಿದೆ.

ನನ್ನ ಪ್ರಕಾರ ಯಾವುದೇ ಒಬ್ಬ ವ್ಯಕ್ತಿಯನ್ನು ಆತನ ಧರ್ಮದ ಆಧಾರದ ಮೇಲೆ ದಾಳಿ ಮಾಡುವುದು ಅತ್ಯಂತ ಹೀನಕೃತ್ಯ ಎಂದು ಭಾವಿಸುತ್ತೇನೆ. ಪ್ರತಿಯೊಬ್ಬರಿಗೂ ಅವರಿಗೆ ಅಭಿಪ್ರಾಯವನ್ನ ವ್ಯಕ್ತಪಡಿಸುವ ಹಕ್ಕಿದೆ.

ಆದರೆ, ಯಾವುದೇ ಒಬ್ಬ ವ್ಯಕ್ತಿಯನ್ನ ಅವರ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದರ ಬಗ್ಗೆ ನಾನು ಆಲೋಚನೆ ಕೂಡ ಮಾಡುವುದಿಲ್ಲ ಎಂದು ಕೊಹ್ಲಿ ಕಿವೀಸ್​ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಮೊಹಮ್ಮದ್ ಶಮಿ ಅವರು ಭಾರತಕ್ಕೆ ತಮ್ಮ ಬೌಲಿಂಗ್ ಮೂಲಕ ಸಾಕಷ್ಟು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿರುವುದನ್ನು ಅರ್ಥಮಾಡಿಕೊಳ್ಳದೇ ತಮ್ಮ ಹತಾಷೆಯನ್ನು ಟೀಕಿಸುವುದರ ಮೂಲಕ ಕೆಟ್ಟ ರೀತಿಯಲ್ಲಿ ಹೊರ ಹಾಕಿದ್ದಾರೆ.

ಅಂತಹ ವ್ಯಕ್ತಿಯ ಬಗ್ಗೆ ವಿವೇಕಹೀನವಾಗಿ ಕಾಣುವ ಹಾಗೂ ಅವರ ದೇಶಪ್ರೇಮ, ಪ್ರಾಮಾಣಿಕತೆಯನ್ನು ಕಡೆಗಣಿಸುವಂತಹ ವ್ಯಕ್ತಿಗಳ ಬಗ್ಗೆ ನನ್ನ ಜೀವನದ ಒಂದೂ ನಿಮಿಷವನ್ನು ವ್ಯರ್ಥ ಮಾಡಕೊಳ್ಳಲು ನಾನು ಬಯಸುವುದಿಲ್ಲ. ನಾವೆಲ್ಲರೂ ಶಮಿ ಬೆನ್ನಿಗೆ ಇದ್ದೇವೆ. ಅವರನ್ನು ಶೇ.200ರಷ್ಟು ಬೆಂಬಲಿಸುತ್ತೇವೆ. ಇಂತಹ ಹೀನ ಮನಸ್ಥಿತಿಯುಳ್ಳವರ ಟೀಕೆಯಿಂದ ನಮ್ಮ ಸಹೋದರತ್ವಕ್ಕೆ ಕಿಂಚಿತ್ತು ಹಾನಿಯಾಗುವುದಿಲ್ಲ ಎಂದು ವಿರಾಟ್​ ಕಿಡಿಕಾರಿದ್ದಾರೆ.

Sneha Gowda

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

12 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

27 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

39 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

56 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago