ಭದ್ರತಾ ದೃಷ್ಟಿಯಿಂದ ನ್ಯೂಜಿಲೆಂಡ್ ಪುರುಷರ ತಂಡ ತನ್ನ ಪಾಕ್ ಪ್ರವಾಸವನ್ನು ರದ್ದುಗೊಳಿಸಿದ ಬೆನ್ನಲ್ಲೇ ಇದೀಗ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ, ನ್ಯೂಜಿಲೆಂಡ್ ಮಹಿಳಾ ತಂಡ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಸದ್ಯ ಇಮೇಲ್ ಮೂಲಕ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಬಂದಿದೆ.
ಈ ಬಾಂಬ್ ಬೆದರಿಕೆಯಲ್ಲಿ ನಿರ್ದಿಷ್ಟವಾಗಿ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡವನ್ನು ಉಲ್ಲೇಖಿಸಿಲ್ಲ. ಆದರೂ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕ್ರಿಕೆಟ್ ಮಂಡಳಿ, ಪೊಲೀಸರು ಹಾಗೂ ಭಯೋತ್ಪಾದನಾ ನಿಗ್ರಹ ದಳಕ್ಕೆ ಮಾಹಿತಿ ರವಾನಿಸಲಾಗಿದೆ ಎಂದು ಹೇಳಿದೆ.
ಸದ್ಯ ಇಂಗ್ಲೆಂಡ್ ವಿರುದ್ದದ ಮೂರನೇ ಏಕದಿನ ಪಂದ್ಯವಾಡಲು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡ ಲಿಸೇಸ್ಟರ್ಗೆ ಬಂದಿಳಿದಿದೆ. ಬಾಂಬ್ ಬೆದರಿಕೆಯಿಂದಾಗಿ ಆಟಗಾರರು ಅಭ್ಯಾಸದಲ್ಲಿ ಪಾಲ್ಗೊಂಡಿಲ್ಲ ಎಂದು ವರದಿ ತಿಳಿಸಿದೆ.