ಕ್ರೀಡೆ

ಪೃಥ್ವಿ ಶಾ ನನಗಿಂತಲೂ ಹೆಚ್ಚು ಪ್ರತಿಭಾನ್ವಿತ ಆಟಗಾರ; ರಿಕಿ ಪಾಂಟಿಂಗ್

ಮುಂಬೈ : ‘ಆ ಯುವ ಬ್ಯಾಟರ್ ನನ್ನಷ್ಟೇ ಅಥವಾ ನನಗಿಂತಲೂ ಹೆಚ್ಚು ಪ್ರತಿಭಾವಂತ’. ಹೀಗೆಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆಟಗಾರನನ್ನು ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಶ್ಲಾಘಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ನ ಆರಂಭಿಕ ಆಟಗಾರ ಪೃಥ್ವಿ ಶಾ. ಐಪಿಎಲ್ ಕ್ರಿಕೆಟ್ ಟೂರ್ನಿಯ 15ನೇ ಆವೃತ್ತಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಪೃಥ್ವಿ ಶಾ ನಾಲ್ಕು ಪಂದ್ಯಗಳಲ್ಲಿ 160 ರನ್ ಕಲೆಹಾಕಿದ್ದಾರೆ. ಅವರಿಗೆ ಮತ್ತೊಬ್ಬ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರಿಂದ ಉತ್ತಮ ಸಹಕಾರವೂ ದೊರೆಯುತ್ತಿದೆ.

‘ಪೃಥ್ವಿ ಶಾ ಬ್ಯಾಟಿಂಗ್ ನೋಡಿದರೆ ಆತ ನನ್ನಷ್ಟೇ ಅಥವಾ ನನಗಿಂತಲೂ ಹೆಚ್ಚು ಪ್ರತಿಭಾನ್ವಿತ ಎಂಬುದು ಗೊತ್ತಾಗುತ್ತದೆ. ಆತನನ್ನು ಭಾರತ ತಂಡದಲ್ಲಿ 100 ಟೆಸ್ಟ್ ಪಂದ್ಯಗಳನ್ನು ಆಡುವ ಆಟಗಾರನನ್ನಾಗಿ ರೂಪಿಸಬೇಕೆಂಬ ಬಯಕೆ ಇದೆ. ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಆತ ಭಾರತ ತಂಡಕ್ಕಾಗಿ ಆಡುವಂತೆ ಮಾಡಬೇಕಿದೆ. ಇದು ಕೋಚಿಂಗ್‌ ಅನ್ನು ಆಸ್ವಾದಿಸುವ ವಿಷಯಗಳಲ್ಲಿ ಒಂದಾಗಿದೆ’ ಎಂದು ಪಾಂಟಿಂಗ್ ಹೇಳಿದ್ದಾರೆ.

ಐಪಿಎಲ್ ತಂಡಕ್ಕೆ ಕೋಚಿಂಗ್ ನೀಡುವುದು ಸಂತಸದ ವಿಚಾರ. ನಾನು ಕೋಚಿಂಗ್ ನೀಡುವ ಆಟಗಾರರು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮಿಂಚಬೇಕೆಂದು ಬಯಸುತ್ತೇನೆ ಎಂದೂ ಅವರು ಹೇಳಿದ್ದಾರೆ.

‘ನಾನು ಮುಂಬೈ ಇಂಡಿಯನ್ಸ್‌ ಕೋಚ್ ಆಗಿದ್ದಾಗ ರೋಹಿತ್ ಶರ್ಮಾ ಯುವ ಆಟಗಾರನಾಗಿದ್ದರು. ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ ಇನ್ನೂ ಪಂದ್ಯಗಳನ್ನು ಆಡಿರಲಿಲ್ಲ. ನಾನು ತರಬೇತಿ ನೀಡಿದ ಅನೇಕ ಆಟಗಾರರು ಆಮೇಲೆ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಇಂಥ ಕೆಲಸ ಮಾಡಲು ಬಯಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ರಿಕಿ ಪಾಂಟಿಂಗ್ ಕೋಚಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 2020ರ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿತ್ತು. 2019ರಲ್ಲಿ ಪ್ಲೇ ಆಫ್‌ ಹಂತ ಪ್ರವೇಶಿಸಿತ್ತು.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆಲುವು ಸಾಧಿಸಿದೆ. ಸದ್ಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಶನಿವಾರ ಆರ್‌ಸಿಬಿ ವಿರುದ್ಧ ಸೆಣಸಲಿದೆ.

Gayathri SG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

42 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

49 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

60 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago