Categories: ಕ್ರೀಡೆ

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಬೇಟೆ: ಶೂಟಿಂಗ್‌ನಲ್ಲಿ ಮತ್ತೆರಡು ಪದಕ

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪದಕದ ಬೇಟೆ ಮುಂದುವರಿದಿದೆ. ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಭಾರತ ಗೆದ್ದಿದೆ.

ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನದ ಪದಕಕ್ಕೆ ಮುತ್ತಿಟ್ಟರೆ, ಸಿಂಗರಾಜ್ 2ನೇ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭಾರತದ ಮನೀಶ್ ನರ್ವಾಲ್ 218.2 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದು, ಇದು ಭಾರತದ ಪರ ಗರಿಷ್ಠ ದಾಖಲೆ ಕೂಡ ಆಗಿದೆ. ಅದೇ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶೂಟರ್ ಅಧನ ಸಿಂಗರಾಜ್ ಅವರು 216.7 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಒಂದೇ ಪೈನಲ್ ಪಂದ್ಯದಲ್ಲಿ ಉಭಯ ಆಟಗಾರರು ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಈ ಪದಕಗಳ ಮೂಲಕ ಹಾಲಿ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ.

Sampriya YK

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

50 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago