ಕ್ರೀಡೆ

ಫೆಬ್ರವರಿ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಗೆ ಭಾಜನರಾದ ಶ್ರೇಯಸ್​ ಅಯ್ಯರ್

ಮುಂಬೈ : ಭಾರತದ ಉದಯೋನ್ಮುಖ ಬ್ಯಾಟರ್ ಶ್ರೇಯಸ್​ ಅಯ್ಯರ್ ಫೆಬ್ರವರಿ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಹಿಳಾ ವಿಭಾಗದಲ್ಲಿ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿದ್ದ ಅಮೆಲಿಯಾ ಕೆರ್​ ಪಾತ್ರರಾಗಿದ್ದಾರೆ.

ಶ್ರೇಯಸ್​ ಅಯ್ಯರ್ ತವರಿನಲ್ಲಿ ನಡೆದ ವೆಸ್ಟ್​ ಇಂಡೀಸ್ ಮತ್ತು ಶ್ರೀಲಂಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ವಿಂಡೀಸ್​ ವಿರುದ್ಧದ ಸರಣಿಯಲ್ಲಿ ತಲಾ ಒಂದು ಏಕದಿನ ಮತ್ತು ಟಿ20 ಪಂದ್ಯವನ್ನಾಡಿದ್ದ ಅಯ್ಯರ್, ಕ್ರಮವಾಗಿ 80 ಮತ್ತು 25 ರನ್​ಗಳಿಸಿದ್ದರು.

ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಒಂದೂ ಪಂದ್ಯದಲ್ಲೂ ವಿಕೆಟ್ ಒಪ್ಪಿಸದೆ ದಾಖಲೆಯ 204ರನ್​ ಸಿಡಿಸಿ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ಅವರು ಪಂದ್ಯಗಳಲ್ಲಿ ಕ್ರಮವಾಗಿ 57(28), 74(44) ಮತ್ತು 73(45) ರನ್​ಳಿಸಿದ್ದರು.

ಫೆಬ್ರವರಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಭಾಜನಾಗಿರುವ ಅಮೆಲಿಯಾ ಕೆರ್​​ ವಿಶ್ವಕಪ್​ಗೂ ಮುನ್ನ ನಡೆದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಸುಪ್ರೀಂ ಪ್ರದರ್ಶನ ತೋರಿದ್ದರು. ಅವರು ಭಾರತ ಮಿಥಾಲಿ ರಾಜ್​, ದೀಪ್ತಿ ಶರ್ಮಾರನ್ನು ಹಿಂದಿಕ್ಕಿ ಈ ಪ್ರಶಸ್ತಿ ಪಡೆದಿದ್ದಾರೆ.

ನ್ಯೂಜಿಲ್ಯಾಂಡ್​​ ಆಲ್​ರೌಂಡರ್ 117ರ ಸರಾಸರಿಯಲ್ಲಿ​ 353 ರನ್​ ಮತ್ತು 7 ವಿಕೆಟ್ ಪಡೆದಿದ್ದರು. 2ನೇ ಮತ್ತು 4ನೇ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದರು.

Gayathri SG

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

5 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

29 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

43 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago