ಟೋಕಿಯೊ: ಭಾರತದ ಖ್ಯಾತ ಕುಸ್ತಿಪಟು ರವಿಕುಮಾರ್ ದಹಿಯಾ, ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್ಗೆ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇವರ ಪ್ರವೇಶದಿಂದಾಗಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ.
ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು
ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲೇ ಪದಕ ಗೆಲ್ಲುತ್ತಿರುವ ಐದನೇ ಭಾರತೀಯ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಮೂಲಕ ದಿಗ್ಗಜರಾದ ಕೆ.ಡಿ ಜಾಧವ್, ಸುಶೀಲ್ ಕುಮಾರ್, ಯೋಗೇಶ್ವರ್ ದತ್ ಮತ್ತು ಸಾಕ್ಷಿ ಮಲಿಕ್ ಸಾಲಿಗೆ ಸೇರಿದ್ದಾರೆ. ಅಷ್ಟೇ ಯಾಕೆ ಸುಶೀಲ್ ಕುಮಾರ್ ಬಳಿಕ ಒಲಿಂಪಿಕ್ ಫೈನಲ್ಗೆ ಪ್ರವೇಶಿಸಿದ ಭಾರತದ ಎರಡನೇ ಕುಸ್ತಿಪಟು ಎಂಬ ಹಿರಿಮೆಗೂ ಭಾಜನರಾಗಿದ್ದಾರೆ.
ಮೊದಲ ರೌಂಡ್ನಲ್ಲಿ 0-1 ಹಾಗೂ ದ್ವಿತೀಯ ಸುತ್ತಿನಲ್ಲಿ 2-9ರಲ್ಲಿ ಹಿನ್ನಡೆ ಅನುಭವಿಸಿದ ರವಿಕುಮಾರ್, ಕೊನೆಯ ರೌಂಡ್ನಲ್ಲಿ ನಂಬಲಾಗದ ರೀತಿಯಲ್ಲಿ ತಿರುಗೇಟು ನೀಡಿ ಎದುರಾಳಿಯನ್ನು ಮಗುಚಿ ಹಾಕಿದರು. ಈ ಮೂಲಕ ಕೆಚ್ಚೆದೆಯ ಹೋರಾಟ ಪ್ರದರ್ಶಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.
ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದ ರವಿ ಕುಮಾರ್ ದಹಿಯಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.