News Karnataka Kannada
Sunday, May 19 2024
ಕ್ರೀಡೆ

ಫ್ರೆಂಚ್ ಓಪನ್ ಟೆನಿಸ್: ರಫೆಲ್ ನಡಾಲ್ ಗೆ ಜಯ

Photo Credit :

ಪ್ಯಾರಿಸ್: ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್ ನಡಾಲ್ ಅವರು ವಿಶ್ವ ಕ್ರಮಾಂಕದಲ್ಲಿ ಒಂದನೇ ಸ್ಥಾನದಲ್ಲಿರುವ ನೊವಾಕ್ ಜೊಕೊವಿಚ್ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಸರ್ಬಿಯಾದ ಜೊಕೊವಿಚ್ ಅವರನ್ನು 6-2, 4-6, 6-2, 7-6 ಸೆಟ್‌ಗಳಿಂದ ರಫೆಲ್ ನಡಾಲ್ ಸೋಲಿಸಿದ್ದಾರೆ.

ಮೊದಲ ಸೆಟ್‌ನಲ್ಲಿ ಜೊಕೊವಿಕ್ ವಿರುದ್ಧ ನಡಾಲ್ ಮುನ್ನಡೆ ಸಾಧಿಸಿದರೆ, ಜೊಕೊವಿಕ್ ಎರಡನೇ ಸೆಟ್‌ನಲ್ಲಿ ಪಾರಮ್ಯ ಮೆರೆದರು. ಆದರೆ, ದಿಟ್ಟ ಆಟವಾಡಿದ ನಡಾಲ್ ಮೂರು ಮತ್ತು ನಾಲ್ಕನೇ ಸುತ್ತಿನಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ನಗೆ ಬೀರಿದರು.

13 ಬಾರಿಯ ಚಾಂಪಿಯನ್ ಆಗಿರುವ ನಡಾಲ್ ಈ ಗೆಲುವಿನ ಮೂಲಕ ಫ್ರೆಂಚ್ ಓಪನ್ ಟೂರ್ನಿಯಲ್ಲಿ 15ನೇ ಬಾರಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಜೊಕೊವಿಕ್, ಕಳೆದ ವರ್ಷ ನಡೆದಿದ್ದ ಫ್ರೆಂಚ್ ಓಪನ್ ಟೂರ್ನಿಯಲ್ಲಿ ನಡಾಲ್ ಅವರನ್ನು ಸೋಲಿಸಿ ಪ್ರಶಸ್ತಿಗೆ ಮುತ್ತಿಕ್ಕಿದ್ದರು. ‘ಆವೆಮಣ್ಣಿನಲ್ಲಿ ನಾನು ರಾತ್ರಿ ಅವಧಿಯಲ್ಲಿ ಆಡಲು ಇಚ್ಛಿಸುವುದಿಲ್ಲ. ಇದು ಅತ್ಯಂತ ಕಠಿಣ ಸವಾಲಾಗಿದ್ದು ಪಂದ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದು ನಡಾಲ್ ಪಂದ್ಯಕ್ಕೂ ಮುನ್ನ ಅಸಮಾಧಾನ ವ್ಯಕ್ತಪಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು