News Karnataka Kannada
Friday, May 03 2024
ಕ್ರೀಡೆ

ಭಾರತ-ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ರದ್ದು

India Win Cricket 17082021
Photo Credit :

ಕ್ರಿಕೆಟ್  : ಭಾರತ ತಂಡದ ಕ್ರಿಕೆಟ್ ಆಟಗಾರರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಭಾರತ-ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯವನ್ನು ಬಿಸಿಸಿಐ ರದ್ದುಗೊಳಿಸಿದೆ. ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ನಡೆಯಬೇಕಿದ್ದ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡಿದೆ. ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಕಾಯ್ದುಕೊಂಡಿದೆ.

4ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ವರದಿಯಾಗಿತ್ತು. ಬಳಿಕ ಅವರ ಸಂಪರ್ಕದಲ್ಲಿದ್ದ ಮೂವರು ಸಹಾಯಕ ಸಿಬ್ಬಂದಿಗಳಾದ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮತ್ತು ಫಿಸಿಯೋ ನಿತೀನ್ ಪಟೇಲ್ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು.

ನಿನ್ನೇ ಮತ್ತೋರ್ವ ಸಹಾಯಕ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢವಾದ ಬೆನ್ನಲ್ಲೇ ಎಲ್ಲಾ ಆಟಗಾರರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಆಟಗಾರರ ರಿಪೋರ್ಟ್ ನೆಗೆಟಿವ್ ಬಂದಿತ್ತು. ಆದರೂ ಕೂಡ ಕೋವಿಡ್ ಹರಡುವ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು