News Karnataka Kannada
Monday, April 29 2024
ಕ್ರೀಡೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಪಂದ್ಯಕ್ಕ್ ಪ್ರೇಕ್ಷಕರಿಗೆ ಅವಕಾಶವಿಲ್ಲ: ಬಿಸಿಸಿಐ ಹೇಳಿಕೆ

Photo Credit :

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಪಂದ್ಯಕ್ಕ್ ಪ್ರೇಕ್ಷಕರಿಗೆ ಅವಕಾಶವಿಲ್ಲ: ಬಿಸಿಸಿಐ ಹೇಳಿಕೆ

ಅಹಮದಾಬಾದ್: ಗುಜರಾತ್‌ನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 16, 18 ಮತ್ತು 20 ರಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಉಳಿದ ಮೂರು ಟಿ20 ಅಂತರರಾಷ್ಟ್ರೀಯ ಪಂದ್ಯಗಳು ವೀಕ್ಷಕರಿಲ್ಲದೆ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ತಿಳಿಸಿದೆ.

ದೇಶಾದ್ಯಂತ ಮತ್ತೆ ಕೋವಿಡ್-19 ಪ್ರಕರಣಗಳು ಹೆಚ್ಚಾದ ಕಾರಣ ಆಟಗಾರರ ಹಾಗೂ ಜನರ ಸುರಕ್ಷತಾ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ ಉಪಾಧ್ಯಕ್ಷ ಧನರಾಜ್ ನಾಥ್ವಾನಿ ಹೇಳಿದ ನಂತರ ಬಿಸಿಸಿಐ ಪ್ರಕಟಣೆ ಹೊರಡಿಸಿದೆ.

ಟಿ-ಟ್ವೆಂಟಿ 5 ಸರಣಿ ಪಂದ್ಯಾವಳಿಗಳಲ್ಲಿ ಎರಡು ಈಗಾಗಲೇ ಮುಗಿದಿದ್ದು, ಅದಕ್ಕೆ ಪ್ರೇಕ್ಷಕರನ್ನು ಒಳ ಬಿಟ್ಟು ಕೊಳ್ಳಲಾಗಿತ್ತು. ಆದರೆ ಇದೀಗ ಇನ್ನುಳಿದ ಮೂರು ಪಂದ್ಯಾವಳಿಗಳಿಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ ಎಂದು ತಿಳಿಸಿತು, ಈಗಾಗಲೇ ಈ ಮೂರು ಪಂದ್ಯಗಳಿಗೆ ಟಿಕೆಟ್ ಖರೀದಿಸಿದ ಪ್ರೇಕ್ಷಕರಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ನಾಥ್ವಾನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು