ಮಗಳ ಫೋಟೋವನ್ನು ದಯವಿಟ್ಟು ವೈರಲ್‌ ಮಾಡಬೇಡಿ; ವಿರಾಟ್‌ ಕೊಹ್ಲಿ-ಅನುಷ್ಕಾ ಮನವಿ

ಹೊಸದಿಲ್ಲಿ : ಮಗಳು ವಮಿಕಾಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದಕ್ಕೆ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮ ತೀವ್ರ ಅಸಮಾಧಾನಗೊಂಡಿದ್ದಾರೆ. ಇದನ್ನು ದಯವಿಟ್ಟು ವೈರಲ್‌ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಭಾರತ-ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯದ ವೇಳೆ ವಿರಾಟ್‌ ಕೊಹ್ಲಿ ಅರ್ಧ ಶತಕ ಪೂರ್ತಿಗೊಳಿಸಿದಾಗ ಗ್ಯಾಲರಿಯಲ್ಲಿ ಮಗಳನ್ನು ಎತ್ತಿಕೊಂಡಿದ್ದ ಅನುಷ್ಕಾ ಕಾಣಿಸಿಕೊಂಡರು.  ಈ ವೇಳೆ ಕೊಹ್ಲಿ ಜೋಗುಳ ಹಾಡುವ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಕ್ರಿಕೆಟ್‌ ನೇರ ಪ್ರಸಾರದಲ್ಲಿ ಈ ದೃಶ್ಯ ಸೆರೆಯಾಗಿತ್ತು. ಸ್ವಲ್ಪ ಹೊತ್ತಿನಲ್ಲಿ ವಮಿಕಾ ಚಿತ್ರ ವೈರಲ್‌ ಆಗಿತ್ತು. ಅಭಿಮಾನಿಗಳು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರವನ್ನು ಹಂಚಿಕೊಂಡಿದ್ದರು.

ಕೋರಿಕೆಯಲ್ಲಿ ಬದಲಾವಣೆ ಇಲ್ಲ
ಇದೀಗ ಮಗಳ ಫೋಟೋ ವೈರಲ್‌ ಆದ ವಿಚಾರ ತಿಳಿದ ಬಳಿಕ ಪ್ರತಿಕ್ರಿಯೆ ನೀಡಿರುವ ವಿರಾಟ್‌ ಕೊಹ್ಲಿ, “ಸ್ನೇಹಿತರೇ, ರವಿವಾರ ಮಗಳ ಚಿತ್ರಗಳನ್ನು ಕ್ರೀಡಾಂಗಣದಲ್ಲಿ ಸೆರೆಹಿಡಿಯಲಾಗಿದ್ದು, ಬಳಿಕ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಕ್ಯಾಮರಾ ಕಣ್ಣುಗಳು ನಮ್ಮ ಮೇಲಿದ್ದವು ಎಂಬ ವಿಚಾರ ತಿಳಿದಿರಲಿಲ್ಲ. ಆದರೂ ಈ ವಿಚಾರದಲ್ಲಿ ನಮ್ಮ ನಿಲುವು ಹಾಗೂ ಕೋರಿಕೆಯಲ್ಲಿ ಬದಲಾವಣೆಯಿಲ್ಲ. ನಾವು ಈ ಹಿಂದೆ ತಿಳಿಸಿದ ಕಾರಣಗಳಿಗಾಗಿ ವಮಿಕಾಳ ಚಿತ್ರಗಳನ್ನು ಸೆರೆಹಿಡಿಯದಂತೆ, ಪ್ರಕಟಿಸದಂತೆ ವಿನಂತಿಸುತ್ತೇವೆ’ ಎಂದು ಹೇಳಿದ್ದಾರೆ.

Gayathri SG

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

2 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

8 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

13 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

15 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

26 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

28 mins ago