Categories: ಕ್ರೀಡೆ

ಮತ್ತೆ ಪಿಚ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಘೋಷಿಸಿದ ಯುವರಾಜ್ ಸಿಂಗ್

ದೆಹಲಿ : ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರು ಮತ್ತೆ ಪಿಚ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಮಂಗಳವಾರ ಘೋಷಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಜನರ ಬೇಡಿಕೆಯ ಮೇರೆಗೆ ನಾನು ಫೆಬ್ರುವರಿಯಲ್ಲಿ ಮತ್ತೆ ಪಿಚ್‌ಗೆ ಮರಳಲಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಕೋರಿಕೆಗೆ ಧನ್ಯವಾದಗಳು. ಭಾರತವನ್ನು ಬೆಂಬಲಿಸುತ್ತಿರಿ. ಇದು ನಮ್ಮ ತಂಡ. ನಿಜವಾದ ಅಭಿಮಾನಿಗಳು ಕಠಿಣ ಸಮಯದಲ್ಲೂ ಬೆಂಬಲವಾಗಿರುತ್ತಾರೆ,’ ಎಂದು ಅವರು ಬರೆದುಕೊಂಡಿದ್ದಾರೆ.

2011ರ ವಿಶ್ವಕಪ್‌ನಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ್ದ ಯುವರಾಜ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಯುವರಾಜ್ 90.50ರ ಸರಾಸರಿಯಲ್ಲಿ 362 ರನ್ ಗಳಿಸಿದ್ದಲ್ಲದೇ, 15 ವಿಕೆಟ್‌ಗಳನ್ನೂ ಪಡೆದಿದ್ದರು. ಯುವರಾಜ್ 2011ರ ವಿಶ್ವಕಪ್‌ನಲ್ಲಿ ತಮ್ಮ ಕ್ರಿಕೆಟ್‌ ವೃತ್ತಿ ಜೀವನದ ಉತ್ತುಂಗದಲ್ಲಿದ್ದರಾದರೂ, ವಿಶ್ವಕಪ್‌ ಕೂಟ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಕ್ಯಾನ್ಸರ್‌ನಿಂದ ಬಳಲಿದರು.

ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಜಗತ್ತಿನ ಹಲವು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಯುವರಾಜ್‌ ಆಡಿದ್ದಾರೆ. ಜಿಟಿ 20 ಲೀಗ್‌ನಲ್ಲಿ ಟೊರೊಂಟೊ ನ್ಯಾಷನಲ್ಸ್ ಅನ್ನು ಪ್ರತಿನಿಧಿಸಿದ್ದಾರೆ. ಅಬುಧಾಬಿ ಟಿ10ನಲ್ಲಿ ಅವರು ಮರಾಠ ಅರೇಬಿಯನ್ಸ್‌ಗಾಗಿ ಆಡಿದ್ದಾರೆ.

ಯುವರಾಜ್ ಸಿಂಗ್ ಭಾರತಕ್ಕಾಗಿ ಅಥವಾ ಟಿ 20 ಲೀಗ್‌ಗಳಲ್ಲಿ ಆಡಲು ಮರಳುತ್ತಾರೆಯೇ ಎಂಬುದು ಇನ್ನೂ ಅಸ್ಪಷ್ಟವಾಗಿದ್ದರೂ, ಕ್ರಿಕೆಟ್ ಪಿಚ್‌ನಲ್ಲಿ ಸ್ಟಾರ್ ಬ್ಯಾಟರ್ ಅನ್ನು ಮತ್ತೊಮ್ಮೆ ಕಂಣ್ತುಬಿಕೊಳ್ಳಲು ಅಭಿಮಾನಿಗಳು ಕಾತರದಲ್ಲಿದ್ದಾರೆ.

 

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

14 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

28 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

40 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

56 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago