Categories: ಕ್ರೀಡೆ

ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ

ರಾಂಗ್ಯೊರ, ನ್ಯೂಜಿಲೆಂಡ್‌ : ಮರಳಿ ಫಾರ್ಮ್‌ಗೆ ಬಂದಿರುವ ಸ್ಫೋಟಕ ಬ್ಯಾಟರ್ ಹರ್ಮನ್‌ಪ್ರೀತ್ ಕೌರ್ ಅವರು ಅಮೋಘ ಶತಕದ ಮೂಲಕ ಮಿಂಚಿದರು. ಎಡಗೈ ಸ್ಪಿನ್ನರ್‌, ಕರ್ನಾಟಕದ ರಾಜೇಶ್ವರಿ ಗಾಯಕವಾಡ್ ಅವರು ಪರಿಣಾಮಕಾರಿ ಬೌಲಿಂಗ್ ದಾಳಿ ಸಂಘಟಿಸಿದರು.ಇದರ ಪರಿಣಾಮ ಭಾರತ ತಂಡ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಜಯ ಗಳಿಸಿತು.

ಭಾನುವಾರ ನಡೆದ ಪಂದ್ಯದಲ್ಲಿ ಭಾರತ ಎರಡು ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿತು. ಕೆಲವು ಕಾಲದಿಂದ ಫಾರ್ಮ್ ಕಳೆದುಕೊಂಡಿದ್ದ ಹರ್ಮನ್‌ಪ್ರೀತ್ ಕೌರ್ ಈಚೆಗೆ ನ್ಯೂಜಿಲೆಂಡ್ ವಿರುದ್ಧ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದರು. ದಕ್ಷಿಣ ಆಫ್ರಿಕಾ ಎದುರಿನ ಹಣಾಹಣಿಯಲ್ಲಿ ಅವರು 114 ಎಸೆತಗಳಲ್ಲಿ 103 ರನ್ ಗಳಿಸಿದರು. 9 ಬೌಂಡರಿಗಳು ಅವರ ಇನಿಂಗ್ಸ್‌ನಲ್ಲಿದ್ದವು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 9ಕ್ಕೆ 244 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಟ್ (83; 95 ಎಸೆತ, 7 ಬೌಂಡರಿ, 2 ಸಿಕ್ಸರ್) ಮತ್ತು ಸೂನೆ ಲುಸ್‌ (86; 98 ಎ, 6 ಬೌಂ) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಜಯದತ್ತ ಹೆಜ್ಜೆ ಹಾಕಿತ್ತು. ಆದರೆ ರಾಜೇಶ್ವರಿ ಗಾಯಕವಾಡ್ ಅವರ ಪ್ರಬಲ ದಾಳಿಗೆ ನಲುಗಿ ಇತರ ಬ್ಯಾಟರ್‌ಗಳು ವೈಫಲ್ಯ ಕಂಡರು. ತಂಡಕ್ಕೆ 7 ವಿಕೆಟ್ ಕಳೆದುಕೊಂಡು 242 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಭಾರತದ ಪರ ಆರಂಭಿಕ ಬ್ಯಾಟರ್ ಯಾಷ್ಟಿಕಾ ಭಾಟಿಯಾ (58; 78 ಎ, 4 ಬೌಂ, 1 ಸಿ) ಅರ್ಧಶತಕ ಗಳಿಸಿ ಮಿಂಚಿದರು. ಐವರು ಎರಡಂಕಿ ಮೊತ್ತ ದಾಟದೆ ಮರಳಿದರು.

ಮಾರ್ಚ್‌ ಆರರಂದು ನಡೆಯಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಮಹಿಳೆಯರು ಪಾಕಿಸ್ತಾನ ಮಹಿಳೆಯರನ್ನು ಎದುರಿಸುವರು. ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಗಳಿಸಿತು.

ಸಂಕ್ಷಿಪ್ತ ಸ್ಕೋರು: ಭಾರತ: 50 ಓವರ್‌ಗಳಲ್ಲಿ 9ಕ್ಕೆ 244 (ಹರ್ಮನ್‌ಪ್ರೀತ್ ಕೌರ್ 103, ಯಾಷ್ಟಿಕ ಭಾಟಿಯಾ 58, ಸ್ನೇಹ್ ರಾಣಾ 14, ಪೂಜಾ ವಸ್ತ್ರಕರ್ 16; ಅಯಬೊಂಗ ಕಾಕ 23ಕ್ಕೆ3); ದಕ್ಷಿಣ ಆಫ್ರಿಕಾ: 50 ಓವರ್‌ಗಳಲ್ಲಿ 7ಕ್ಕೆ 242 (ಲಾರಾ ವೊಲ್ವಾರ್ಟ್‌ 75, ಸೂನ್‌ ಲುಸ್‌ 94; ಮೇಘನಾ ಸಿಂಗ್ 38ಕ್ಕೆ1, ರಾಜೇಶ್ವರಿ ಗಾಯಕವಾಡ್‌ 46ಕ್ಕೆ4, ಸ್ನೇಹ್ ರಾಣ 38ಕ್ಕೆ1, ಪೂನಂ ಯಾದವ್ 54ಕ್ಕೆ1)

Gayathri SG

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

7 seconds ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

26 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

40 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

55 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago