Categories: ಕ್ರೀಡೆ

ಮಿಥಾಲಿ-ಯಸ್ತಿಕಾ ಶತಕದ ಜೊತೆಯಾಟ: ಆಸೀಸ್​ಗೆ 278 ರನ್ಸ್ ಟಾರ್ಗೆಟ್

ನ್ಯೂಜಿಲೆಂಡ್: ಭಾರತ ತಂಡವು ಇಲ್ಲಿನ ಈಡನ್ ಪಾರ್ಕ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 277 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನಾಯಕಿ ಮಿಥಾಲಿ ರಾಜ್ (68), ಯಷ್ಟಿಕಾ ಭಾಟಿಯಾ (59) ಹಾಗೂ ಹರ್ಮನ್‌ಪ್ರೀತ್ ಕೌರ್ (57*) ಆಕರ್ಷಕ ಅರ್ಧಶತಕಗಳ ನೆರವಿನಿಂದ

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಭಾರತದ ಆರಂಭ ಉತ್ತಮವಾಗಿರಲಿಲ್ಲ. 28 ರನ್ ಗಳಿಸುವಷ್ಟರಲ್ಲಿ ಸ್ಮೃತಿ ಮಂದಾನ (10) ಹಾಗೂ ಶಫಾಲಿ ವರ್ಮಾ (12) ವಿಕೆಟ್‌ಗಳು ನಷ್ಟವಾದವು.

ಕೊನೆಯಲ್ಲಿ 34 ರನ್ ಗಳಿಸಿದ ಪೂಜಾ ವಸ್ತ್ರಕರ್ ಸಹ ಉಪಯುಕ್ತ ಕೊಡುಗೆಯನ್ನು ನೀಡಿದರು.

ಕೊನೆಯಲ್ಲಿ ಪೂಜಾ ವಸ್ತ್ರಕರ್ ಜೊತೆ ಸೇರಿದ ಹರ್ಮನ್‌ಪ್ರೀತ್ ಎಂಟನೇ ವಿಕೆಟ್‌ಗೆ 64 ರನ್‌ಗಳ ಜೊತೆಯಾಟ ಕಟ್ಟುವ ಮೂಲಕ ಸವಾಲಿನ ಮೊತ್ತ ಪೇರಿಸಲು ನೆರವಾದರು.

47 ಎಸೆತಗಳನ್ನು ಎದುರಿಸಿದ ಹರ್ಮನ್‌ಪ್ರೀತ್ ಆರು ಬೌಂಡರಿಗಳ ನೆರವಿನಿಂದ 57 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನೊಂದೆಡೆ ಇನ್ನಿಂಗ್ಸ್‌ನ ಅಂತಿಮ ಎಸೆತದಲ್ಲಿ ರನೌಟ್ ಆದ ಪೂಜಾ 28 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.

ಆಸೀಸ್ ಪರ ಡಾರ್ಸಿ ಬ್ರೌನ್ ಮೂರು ಹಾಗೂ ಅಲ್ನಾ ಕಿಂಗ್ ಎರಡು ವಿಕೆಟ್ ಕಬಳಿಸಿದರು.

Swathi MG

Recent Posts

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

43 seconds ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

27 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

40 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

60 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago