Categories: ಕ್ರೀಡೆ

ಮುಂಬರುವ ಮಹಿಳಾ ಟೆಸ್ಟ್ ಕ್ರಿಕೆಟ್ ಹಾಗೂ ಟಿ-ಟ್ವೆಂಟಿ ಪಂದ್ಯಾವಳಿಗಳ ತಂಡದ ಪಟ್ಟಿ ಪ್ರಕಟ

ಮುಂಬೈ: ಮುಂಬರುವ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಮಹಿಳಾ ಕ್ರಿಕೆಟ್ ಪಂದ್ಯಾವಳಿಗಳಿಗೆ ಭಾರತ ಮಹಿಳಾ ಆಟಗಾರ್ತಿಯರ ತಂಡ ವನ್ನು ಪ್ರಕಟಿಸಲಾಗಿದ್ದು, ಏಕದಿನ ಹಾಗೂ ಟೆಸ್ಟ್ ತಂಡವನ್ನು ಮಿಥಾಲಿ ರಾಜ್ ಮುನ್ನಡೆಸಿದರೆ, ಟಿ20 ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಒಂದು ಟೆಸ್ಟ್, 3 ಏಕದಿಕ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿವೆ.

 

ಮೊದಲಿಗೆ ಭಾರತ ತಂಡವು ಜೂನ್‌ 16ರಿಂದ ಇಂಗ್ಲೆಂಡ್ ವಿರುದ್ದ ಏಕೈಕ ಟೆಸ್ಟ್ ಪಂದ್ಯವನ್ನಾಡಲಿದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಜೂನ್‌ 27ರಿಂದ ಆರಂಭವಾಗಲಿದೆ. ಭಾರತದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಹಾಗೂ ವೇಗದ ಬೌಲರ್‌ ಶಿಖಾ ಪಾಂಡೆ ಮೂರು ಮಾದರಿಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 

ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡದಲ್ಲಿ ಮಿಥಾಲಿ ರಾಜ್(ನಾಯಕಿ), ಸ್ಮೃತಿ ಮಂಧನಾ, ಹರ್ಮನ್‌ಪ್ರೀತ್ ಕೌರ್(ಉಪನಾಯಕಿ), ಪೂನಂ ರಾವತ್, ಪ್ರಿಯಾ ಪೂನಿಯಾ, ದೀಪ್ತಿ ಶರ್ಮಾ, ಜೆಮಿಯಾ ರೋಡ್ರಿಗಸ್‌, ಶಫಾಲಿ ವರ್ಮಾ, ಸ್ನೆಹ್ ರಾಣಾ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಇಂದ್ರಾಣಿ ರಾಯ್(ವಿಕೆಟ್ ಕೀಪರ್), ಜೂಲನ್ ಗೋಸ್ವಾಮಿ, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂದತಿ ರೆಡ್ಡಿ, ಪೂನಂ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್ ಆಡಲಿದ್ದಾರೆ. 

 

ಇನ್ನೂ, ಟಿ20 ಸರಣಿಗೆ ಭಾರತ ತಂಡದಲ್ಲಿ ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧನಾ(ಉಪನಾಯಕಿ), ದೀಪ್ತಿ ಶರ್ಮಾ, ಜೆಮಿಯಾ ರೋಡ್ರಿಗಸ್, ಶಫಾಲಿ ವರ್ಮಾ, ರಿಚಾ ಘೋಷ್, ಹರ್ಲೀನ್ ಡಿಯೋಲ್, ಸ್ನೆಹ್ ರಾಣಾ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಇಂದ್ರಾಣಿ ರಾಯ್(ವಿಕೆಟ್ ಕೀಪರ್), ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂದತಿ ರೆಡ್ಡಿ, ಪೂನಂ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್, ಸಿಮ್ರನ್‌ ದಿಲ್ ಬಹುದ್ದೂರ್ ತಮ್ಮ ಪ್ರದರ್ಶನ ನೀಡಲಿದ್ದಾರೆ. 

 

 

 

 

Desk

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

6 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

16 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

25 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

41 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

47 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago