Categories: ಕ್ರೀಡೆ

ಮೂರು ಕಂಪನಿಗಳ ವಿರುದ್ಧ ಪಿ. ವಿ. ಸಿಂಧು ಕೋರ್ಟ್ ಗೆ ಹೋಗಲು ನಿರ್ಧಾರ

ಹೈದ್ರಾಬಾದ್ : ಭಾರತದ ಬ್ಯಾಡ್ಮಿಂನ್ ತಾರೆ ಪಿ. ವಿ. ಸಿಂಧು ತಮ್ಮ ಅನುಮತಿ ಇಲ್ಲದೇ ಜಾಹಿರಾತಿಗಾಗಿ ತಮ್ಮ ಹೆಸರನ್ನು ಬಳಸಿಕೊಂಡ ಹಿನ್ನಲೆಯ್ಲಲಿ, ಮೂರು ಕಂಪನಿಗಳ ವಿರುದ್ಧ ಕೂರ್ಟ್ ಮೆಟ್ಟಿಲೇರಲು ನಿರ್ಧಾರಿಸಿದ್ದಾರೆಂದು ತಿಳಿದು ಬಂದಿದೆ.
ಪರ್ಫೆಟ್ಟಿ ವ್ಯಾನ್ ಮೆಲ್, ಪಿ&ಜಿ, ಪಾನ್ ಬಹಾರ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್ ಸಿಂಧೂ ಅನುಮತಿ ಇಲ್ಲದೆ ಅವರ ಹೆಸರನ್ನು ಬಳಸಿ ಮಾರುಕಟ್ಟೆ ನಡೆಸುತ್ತಿದೆ ಎಂದು ಹೇಳಿದೆ. ಈ ಪ್ರತಿಯೊಂದು ಕಂಪೆನಿಯಿಂದ ನಮಗೆ ಸುಮಾರು 5 ಕೋಟಿಯಷ್ಟು ನಷ್ಟವಾಗಿದೆ ಎಂದು ಬೇಸ್‌ಲೈನ್ ವೆಂಚರ್ಸ್ ತಿಳಿಸಿದೆ.
“ಭಾರತದ ಇಂತಹ ಪ್ರಮುಖ ಜಾಗತಿಕ ಸಂಸ್ಥೆಗಳು ಅನುಮತಿ ಇಲ್ಲಿದೆ ಪಿವಿ ಸಿಂಧೂ ಹೆಸರನ್ನು ಬಳಸಿ ಮಾರ್ಕೆಂಟಿಂಗ್ ಮಾಡುತ್ತಿರುವುದು ನಮಗೆ ಆಶ್ಚರ್ಯವನ್ನುಂಟು ಮಾಡಿದೆ. ಇದು ಅವರ ಐಪಿಆರ್ ಮತ್ತು ಗೌಪ್ಯತೆಯನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತದೆ. ಇದರಿಂದ ಕ್ರೀಡಾಪಟುಗಳು ಬ್ರ್ಯಾಂಡ್ ಆಗಿ ಒಪ್ಪಿಕೊಂಡಿರುವ ಇತರೆ ಕಂಪೆನಿಗಳಿಗೆ ಹಿನ್ನಡೆಯಾಗುತ್ತದೆ. ಈರೀತಿ ನಡೆಯುತ್ತಿರುವುದು ಇದೇ ಮೊದಲೇನಲ್ಲ ಮತ್ತು ಸಿಂಧೂ ಅವರಿಗೆ ಮಾತ್ರವಲ್ಲ, ಅನೇಕ ಕ್ರಿಕೆಟಿಗರು ಕೂಡ ಇಂಥಹ ಸಮಸ್ಯೆ ಎದುರಿಸುತ್ತಿದ್ದಾರೆ. ಈರೀತಿಯ ಕಾನೂನು ಬಾಹಿರವಾದ ನಿಯಮಗಳ ಎದುರು ನಿಲ್ಲುವ ಸಮಯ ಬಂದಿದೆ. ನಮ್ಮ ಕ್ರೀಡಾಪಟುಗಳ ಹಕ್ಕುಗಳನ್ನು ರಕ್ಷಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ” ಎಂದು ಬೇಸ್‌ಲೈನ್ ವೆಂಚರ್ಸ್ ವ್ಯವಸ್ಥಾಪಕ ನಿರ್ದೇಶಕ ತುಹಿನ್ ಮಿಶ್ರಾ ಹೇಳಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದ ಪಿವಿ ಸಿಂಧೂ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿದರು. ಹೀಗಾಗಿ ಕಂಚಿನ ಪದಕ್ಕಾಗಿ ನಡೆದ ಹೋರಾಟದಲ್ಲಿ ಗೆಲ್ಲುವ ಮೂಲಕ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದರು. ಚೀನಾದ ಹಿ ಬಿಂಗ್ ಜಿಯಾವೋ ಎದುರು 21-13, 21-15 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು.
Raksha Deshpande

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago