ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಲಿಂಗ ಈ ಬಾರಿಯ ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಸೇರ್ಪಡೆಯಾಗಿದ್ದಾರೆ.
ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಮಲಿಂಗ ಇದೀಗ ರಾಜಸ್ಥಾನ ತಂಡ ಸೇರಿಕೊಳ್ಳಲಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಫ್ರಾಂಚೈಸಿ ಅಧಿಕೃತ ಮಾಹಿತಿ ತಿಳಿಸಿದೆ.
ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿರುವ 38 ವರ್ಷದ ಮಲಿಂಗ ಐಪಿಎಲ್ನಲ್ಲಿ 122 ಪಂದ್ಯಗಳನ್ನಾಡಿದ್ದು, 170 ವಿಕೆಟ್ಗಳನ್ನು ಪಡೆದುಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಪರ ಮಲಿಂಗ 122 ಪಂದ್ಯಗಳನ್ನಾಡಿ 170 ವಿಕೆಟ್ ಕಬಳಿಸುವ ಮೂಲಕ ಐಪಿಎಲ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನ್ನುವ ದಾಖಲೆಯನ್ನೂ ತನ್ನದಾಗಿಸಿಕೊಂಡಿದ್ದಾರೆ.
*𝐤𝐢𝐬𝐬𝐞𝐬 𝐭𝐡𝐞 𝐛𝐚𝐥𝐥*
Lasith Malinga. IPL. Pink. 💗#RoyalsFamily | #TATAIPL2022 | @ninety9sl pic.twitter.com/p6lS3PtlI3
— Rajasthan Royals (@rajasthanroyals) March 11, 2022