ರಾಷ್ಟ್ರೀಯ ಮಟ್ಟದ ಶೂಟರ್ ನಮನ್ವೀರ್ ಸಿಂಗ್ ಬ್ರಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಹಾಲಿಯ ಸೆಕ್ಟರ್ 71 ಮನೆಯಲ್ಲಿ ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದು ಆತ್ಮಹತ್ಯೆಯಾ ಅಥವಾ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ. ದಕ್ಷಿಣ ಕೊರಿಯಾದಲ್ಲಿ ನಡೆದಿದ್ದ ಜಾಗತಿಕ ವಿಶ್ವವಿದ್ಯಾಲಯಗಳ ಡಬಲ್ ಟ್ರಾಪ್ ಶೂಟಿಂಗ್ ವಿಭಾಗದಲ್ಲಿ ನಮನ್ವೀರ್ ಕಂಚಿನ ಪದಕ ಗೆದ್ದಿದ್ದರು.