Categories: ಕ್ರೀಡೆ

ಲಕ್ನೋ ಫ್ರಾಂಚೈಸಿ ತಂಡಕ್ಕೆ ನಾಯಕನಾಗಲು ಒಪ್ಪಿಗೆ ಸೂಚಿಸಿದ ಕೆ.ಎಲ್.ರಾಹುಲ್

ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ ನ 2022ರ ಆವೃತ್ತಿಗೆ ತಯಾರಿ ನಡೆಯುತ್ತಿದೆ. ಬಹುತೇಕ ಮುಂದಿನ ತಿಂಗಳು ಮೆಗಾ ಹರಾಜು ನಡೆಯಲಿದ್ದು, ಆಟಗಾರರ ರಿಟೆನ್ಶನ್ ಪ್ರಕ್ರಿಯೆಯಲ್ಲಿ ಫ್ರಾಂಚೈಸಿಗಳು ತೊಡಗಿದೆ.

ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ ಅವರು ಫ್ರಾಂಚೈಸಿ ತೊರೆಯುವುದು ಬಹುತೇಕ ಖಚಿತವಾಗಿದೆ. ಪಂಜಾಬ್ ತಂಡ ಬಿಟ್ಟು ಬೇರೆ ತಂಡದ ಹುಡುಕಾಟದಲ್ಲಿದ್ದ ಭಾರತೀಯ ಟಿ20 ಉಪ ನಾಯಕನಿಗೆ ಲಕ್ನೋ ಫ್ರಾಂಚೈಸಿ ಗಾಳ ಹಾಕಿದೆ ಎಂದು ವರದಿಯಾಗಿದೆ.

ಮುಂದಿನ ಆವೃತ್ತಿಯ ಎರಡು ಹೊಸ ತಂಡಗಳಲ್ಲಿ ಒಂದಾದ ಲಕ್ನೋ ಫ್ರಾಂಚೈಸಿಯನ್ನು ಆರ್ ಪಿ ಸಂಜೀವ್ ಗೋಯೆಂಕಾ ಗ್ರೂಪ್ (ಆರ್ ಪಿಎಸ್ ಜಿ) ಖರೀದಿಸಿತ್ತು. ಸದ್ಯದ ವರದಿಯ ಪ್ರಕಾರ ಲಕ್ನೋ ಫ್ರಾಂಚೈಸಿ ರಾಹುಲ್ ಜೊತೆ ಮೂರು ವರ್ಷಗಳ ಒಪ್ಪಂದ ಬೇಡಿಕೆ ಇಟ್ಟಿದ್ದು, ರಾಹುಲ್ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ (ರಿಟೈನ್ಡ್) ಆಟಗಾರರ ಪಟ್ಟಿಯನ್ನು ಪ್ರಕಟಿಸಿದ ನಂತರವೇ ಹೊಸ ತಂಡಗಳು ಈ ಆಟಗಾರರನ್ನು ಸಹಿ ಮಾಡಬಹುದು ಮತ್ತು ಅನಾವರಣಗೊಳಿಸಬಹುದು. ಹಳೆಯ ಫ್ರಾಂಚೈಸಿಯಿಂದ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಅಂತಿಮಗೊಳಿಸಲು ನವೆಂಬರ್ 30ರ ಗಡುವು ನೀಡಲಾಗಿದೆ.

ಹೊಸ ಫ್ರಾಂಚಸಿಗಳಿಗಾಗಿ ಬಿಸಿಸಿಐ ಬಿಡುಗಡೆ ಮಾಡಿದ ಮಾನದಂಡಗಳ ಪ್ರಕಾರ, ಮೆಗಾ ಹರಾಜಿಗಿಂತ ಮೊದಲು ಮೂರು ಆಟಗಾರರನ್ನು ಸಹಿ ಮಾಡಲು ಹೊಸ ಐಪಿಎಲ್ ತಂಡಗಳಿಗೆ ಅನುಮತಿಸಲಾಗುತ್ತದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

58 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago