News Karnataka Kannada
Wednesday, May 08 2024
ಕ್ರೀಡೆ

ಲೊವ್ಲಿನಾ ಸೆಮಿಫೈನಲ್ ಪ್ರವೇಶ- ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತ

Olymics Semi 30072021
Photo Credit :

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಬಾಕ್ಸಿಂಗ್​ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ​ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದ ಎರಡನೇ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಚೀನಾದ ಎನ್‌ ಸಿ ಚೆನ್ ವಿರುದ್ಧ 4-1 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಭಾರತದ ಲೊವ್ಲಿನಾ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದ್ದು, ಇದುವರೆಗೂ ಭಾರತಕ್ಕೆ ಒಂದು ಪದಕ ಲಭಿಸಿದೆ. ಸೈಕೋಮ್ ಮೀರಾಬಾಯಿ ಚಾನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಕ್ರೀಡಾಪಟು ಕೂಡ ಪದಕವನ್ನು ಗೆದ್ದಿಲ್ಲ.

ಪಿ.ವಿ. ಸಿಂಧು, ಅತನು ದಾಸ್, ದೀಪಿಕಾ ಕುಮಾರಿ ಮತ್ತು ಭಾರತದ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿದ್ದಾರೆ. ಇವರ ಜೊತೆ ಇದೀಗ ಭಾರತದ ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶ ಮಾಡಿದ್ದು, ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು