ಮುಂಬೈ: ಸಿಯೆಟ್ ಕ್ರಿಕೆಟ್ ರೇಟಿಂಗ್ನ ಅಂತರರಾಷ್ಟ್ರೀಯ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಆಯ್ಕೆಯಾಗಿದ್ದಾರೆ.
ಭಾರತದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಹಾಗೂ ನ್ಯೂಜಿಲೆಂಡ್ನ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಅವರಿಗೆ ಕ್ರಮವಾಗಿ ಅಂತರರಾಷ್ಟ್ರೀಯ ವರ್ಷದ ಬ್ಯಾಟ್ಸ್ಮನ್ ಹಾಗೂ ಬೌಲರ್ ಪ್ರಶಸ್ತಿಯನ್ನು ಸೋಮವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.