Categories: ಕ್ರೀಡೆ

ವಿರಾಟ್ ಕೊಹ್ಲಿ ಬಗ್ಗೆ ಮಹತ್ವದ ಸುಳಿವು ನೀಡಿದ ಕೋಚ್ ರವಿಶಾಸ್ತ್ರಿ

ಭಾರತ ಕ್ರಿಕೆಟ್ ತಂಡದ ಹೊಡಿಬಡಿಯ ಆಟಗಾರ ವಿರಾಟ್ ಕೊಹ್ಲಿ ಬಗ್ಗೆ ದಿನಕ್ಕೊಂದು ಸುದ್ದಿ ಬರುತ್ತಿದೆ. ಇದೀಗ ಭಾರತ ಕ್ರಿಕೆಟ್ ತಂಡದ ನಿರ್ಗಮಿತ ಮುಖ್ಯ ಕೋಚ್ ರವಿಶಾಸ್ತ್ರಿ ಕೊಹ್ಲಿ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಸದ್ಯದ ಏಕದಿನ ಮತ್ತು ರಾಷ್ಟ್ರೀಯ ತಂಡದ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಮುಂದಿನ ದಿನಗಳಲ್ಲಿ ಬ್ಯಾಟಿಂಗ್‌ನತ್ತ ಮಾತ್ರ ಗಮನಹರಿಸಲು ಸೀಮಿತ ಓವರ್‌ಗಳ ನಾಯಕತ್ವವನ್ನು ಸಹ ತ್ಯಜಿಸಬಹುದು ಎಂದು ಭಾವಿಸುವುದಾಗಿ ಹೇಳಿದ್ದಾರೆ.

ಇಂಡಿಯಾ ಟುಡೇ ಜೊತೆಗಿನ ಚರ್ಚೆಯಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಶಾಸ್ತ್ರಿ, ಕೆಂಪು ಬಾಲ್ ಕ್ರಿಕೆಟ್‌ನಲ್ಲಿ ಭಾರತ ಕಳೆದ 5 ವರ್ಷಗಳಿಂದ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ವಿಶ್ವದ ನಂ.1 ತಂಡವಾಗಿದೆ. ಅವರು ಬ್ಯಾಟಿಂಗ್‌ನ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ, ಹೀಗಾಗಿ ಪ್ರಮುಖ ತೀರ್ಮಾನ ಮುಂದಿನ ದಿನಗಳಲ್ಲಿ ಸಂಭವಿಸಬಹುದು, ಅದು ತಕ್ಷಣ ಸಂಭವಿಸುತ್ತದೆ ಎಂದು ಯೋಚಿಸುವುದು ಬೇಡ, ಅದು ಸಂಭವಿಸಬಹುದು ಎಂದಿದ್ದಾರೆ.

ಈ ಹಿಂದೆ ಅನೇಕ ಆಟಗಾರರು ಯಶಸ್ವಿ ಅವಧಿ ಬಳಿಕ ಬ್ಯಾಟಿಂಗ್‌ನತ್ತ ಗಮನಹರಿಸಲು ನಾಯಕತ್ವ ಬಿಟ್ಟುಕೊಟ್ಟಿದ್ದಾರೆ ಎಂದು ಅವರು ತಮ್ಮ ಮಾತು ಮುಂದುವರಿಸಿದರು. ಕೊಹ್ಲಿ ಈಗಾಗಲೇ ಟಿ20 ನಾಯಕತ್ವ ತ್ಯಜಿಸಿದ್ದಾರೆ. ರೋಹಿತ್‌ಗೆ ನಾಯಕತ್ವದ ಹೊಣೆ ನೀಡಲಾಗಿದೆ. ವಿಶ್ವಕಪ್ ಸೂಪರ್ 12 ಹಂತದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಸೋಲಿನಿಂದ ಭಾರತವು ಪಂದ್ಯಾವಳಿಯಿಂದ ಬೇಗನೆ ನಿರ್ಗಮಿಸುವಂತಾದ ಕಾರಣ ಕೊಹ್ಲಿ ಹಾಗೂ ಶಾಸ್ತ್ರಿ ಅವರ ಅವಧಿ ಕೊನೆಗೊಂಡಿತು.

ಕೊಹ್ಲಿ-ಶಾಸ್ತ್ರಿ ಕಾಲದಲ್ಲಿ ಭಾರತ ತಂಡ ವಿಶೇಷವಾಗಿ ಟೆಸ್ಟ್‌ಗಳಲ್ಲಿ ಅದ್ಭುತ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾದಲ್ಲಿ ಎರಡು ಬಾರಿ ಟೆಸ್ಟ್ ಸರಣಿ ಗೆದ್ದುಕೊಂಡಿತ್ತು ಮತ್ತು ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಇತರ ಕಡೆ ನಡೆದ ಪಂದ್ಯಗಳಲ್ಲಿ ವಿಜಯ ಸಾಧಿಸಿತ್ತು.

Gayathri SG

Recent Posts

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

18 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

24 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

42 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

43 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

47 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

58 mins ago