Categories: ಕ್ರೀಡೆ

ಸಾನಿಯಾ ಮಿರ್ಜಾ ಮಗನ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಮಹತ್ವದ ನಿರ್ಧಾರ ತೆಗೆದುಕೊಂಡ ಶೋಯೆಬ್ ಮಲಿಕ್

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮಗನ ಆರೋಗ್ಯದಲ್ಲಿ ಏರುಪೇರಾಗಿದೆ. ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಹಿರಿಯ ಕ್ರಿಕೆಟರ್ ಶೋಯೆಬ್ ಮಲಿಕ್ ಈ ಸಂದರ್ಭದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಿಂದ ಶೋಯೆಬ್ ಮಲಿಕ್ ಹೊರಗುಳಿದಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಬಗ್ಗೆ ಮಾಹಿತಿ ನೀಡಿದೆ. ಶೋಯೆಬ್ ಮಲಿಕ್ ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೈ ಹಿಡಿದಿದ್ದು, ದಂಪತಿಗೆ ಮೂರು ವರ್ಷದ ಮಗನಿದ್ದಾನೆ. ಮಗ ಇಝಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಮಗುವಿನ ಅನಾರೋಗ್ಯದ ಕಾರಣ ಶೋಯೆಬ್ ಮಲಿಕ್ ಸೋಮವಾರ ಬಾಂಗ್ಲಾದೇಶ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಆಡ್ತಿಲ್ಲವೆಂದು ಪಿಸಿಬಿ ಹೇಳಿದೆ. ಪಂದ್ಯಕ್ಕೂ ಮುನ್ನ ಶೋಯೆಬ್ ಮಲ್ಲಿಕ್ ದುಬೈಗೆ ತೆರಳಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಮಧ್ಯೆ ಎರಡು ಪಂದ್ಯ ನಡೆಯಲಿದೆ. ಈ ಸರಣಿಯ ಮೊದಲ ಟೆಸ್ಟ್ ಚಿತ್ತಗಾಂಗ್‌ನಲ್ಲಿ ಶುಕ್ರವಾರ ಶುರುವಾಗಲಿದೆ. ಎರಡನೇ ಟೆಸ್ಟ್ ಢಾಕಾದಲ್ಲಿ ಡಿಸೆಂಬರ್ 4ರಂದು ನಡೆಯಲಿದೆ. ಟಿ-20 ತಂಡದ ಆಟಗಾರರು ದುಬೈ ಮೂಲಕ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಮಂಗಳವಾರ ಆಟಗಾರರು ದುಬೈಗೆ ಪ್ರಯಾಣ ಬೆಳೆಸಲಿದ್ದು, ಶೋಯೆಬ್ ದುಬೈನಲ್ಲಿ ತಂಡ ಸೇರುವ ಸಾಧ್ಯತೆಯಿದೆ.

Gayathri SG

Recent Posts

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

11 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

15 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

40 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

49 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

1 hour ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago