ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್ ಗೆಲುವು ದಾಖಲಿಸಿದೆ.ಈ ಮೂಲಕ ನ್ಯೂಜಿಲೆಂಡ್ ತಂಡವು ಸೆಮಿಫೈನಲ್ಗೇರಿದರೆ, ಅತ್ತ ಟೀಮ್ ಇಂಡಿಯಾ ವಿಶ್ವಕಪ್ನಿಂದ ಹೊರಬಿದ್ದಿದೆ.
ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ ಮಾತ್ರ ಸೆಮಿಫೈನಲ್ಗೇರುವ ಅವಕಾಶ ಟೀಮ್ ಇಂಡಿಯಾಗಿತ್ತು. ಇದೀಗ ನ್ಯೂಜಿಲೆಂಡ್ ಗೆದ್ದು 8 ಅಂಕದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ.ಇದರಿಂದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ನಮೀಬಿಯಾ ವಿರುದ್ದ ಔಪಚಾರಿಕ ಪಂದ್ಯವಾಡಬೇಕಿದೆ.
ಗ್ರೂಪ್-2ನಿಂದ ಈಗಾಗಲೇ ಪಾಕಿಸ್ತಾನ್ ತಂಡವು ಸೆಮಿಫೈನಲ್ ಪ್ರವೇಶಿಸಿದ್ದು, 2ನೇ ತಂಡವಾಗಿ ನ್ಯೂಜಿಲೆಂಡ್ ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಮತ್ತೊಂದೆಡೆ ಗ್ರೂಪ್-1 ರಿಂದ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಪ್ರವೇಶಿಸಿದೆ.