ನವದೆಹಲಿ: ಟೌರಾಂಗನ ಬ್ಲೇಕ್ ಪಾರ್ಕ್ ನಲ್ಲಿ ನಡೆದ ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿ ಪಂದ್ಯಾಟದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 3-1 ಗೋಲುಗಳಿಂದ ಮಣಿಸಿತು.
ಒಲಿಂಪಿಕ್ ಬೆಳ್ಳಿ ಪದಕ ವಿಜೇತ ತಂಡ ಬೆಲ್ಜಿಯಂ ವಿರುದ್ಧ ಭಾರತ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.