ಕ್ರೀಡೆ

ಹ್ಯಾಟ್ರಿಕ್ ಸರಣಿ ಗೆದ್ದ ಟೀಂ ಇಂಡಿಯಾ

ಧರ್ಮಶಾಲಾ : ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 6 ವಿಕೆಟ್ ಗೆಲುವು ಸಾಧಿಸಿದೆ. ಮೂರು ಪಂದ್ಯಗಳ ಸರಣಿಯನ್ನು 3 -0 ಅಂತರದಲ್ಲಿ ಜಯಿಸಿದ ಟೀಂ ಇಂಡಿಯಾ ಹ್ಯಾಟ್ರಿಕ್ ಸರಣಿ ವೈಟ್ ವಾಷ್ ಸಾಧನೆ ಮಾಡಿದೆ. ಕಿವೀಸ್ ಮತ್ತು ವಿಂಡೀಸ್ ನಂತರ ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನೂ ಕ್ಲೀನ್ ಸ್ವೀಪ್ ಮಾಡಿದೆ.

ಈ ಮೂಲಕ ಭಾರತ ದಾಖಲೆ ಬರೆದಿದೆ. ಟೆಸ್ಟ್ ಆಡುವ ದೇಶಗಳ ವಿರುದ್ಧ ಸತತ 3 ಸರಣಿ ವೈಟ್ ವಾಷ್ ಮಾಡಿದ ಮೊದಲ ತಂಡ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧ 3 -0 ಅಂತರದಿಂದ ಟಿ20 ಜಯಿಸಿದೆ.

ಇದರೊಂದಿಗೆ ಭಾರತ ಮತ್ತೊಂದು ದಾಖಲೆ ಬರೆದಿದೆ 12 ಟಿ20 ಪಂದ್ಯಗಳ ಗೆಲುವಿನ ದಾಖಲೆಯನ್ನು ಸರಿಗಟ್ಟಿದೆ. ಆಫ್ಘಾನಿಸ್ತಾನ ಮತ್ತು ರೊಮೇನಿಯಾ ತಂಡಗಳು ಸತತ 12 ಪಂದ್ಯಗಳನ್ನು ಗೆದ್ದು ದಾಖಲೆ ಬರೆದಿದ್ದವು. ಭಾರತ ಈ ದಾಖಲೆ ಸರಿಗಟ್ಟಿದ್ದು, ಇನ್ನೊಂದು ಪಂದ್ಯದಲ್ಲಿ ಗೆದ್ದರೆ ವಿಶ್ವ ದಾಖಲೆಗೆ ಪಾತ್ರವಾಗಲಿದೆ.

ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದು, ಭಾರತ 16.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿ ಗೆಲುವು ಕಂಡಿದೆ. ಶ್ರೇಯಸ್ ಅಯ್ಯರ್ ಅಜೇಯ 73 ರನ್ ಗಳಿಸಿದ್ದು, ಇದರೊಂದಿಗೆ ಹ್ಯಾಟ್ರಿಕ್ ಅರ್ಧ ಶತಕ ಗಳಿಸಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago