Categories: ಕ್ರೀಡೆ

‌ಒಲಂಪಿಕ್ಸ್‌: ಪದಕ ಕೈತಪ್ಪಿದರೂ ದಾಖಲೆ ಬರೆದ ಬೆಂಗಳೂರಿನ ಅದಿತಿ ಅಶೋಕ್

ಟೋಕಿಯೊ: ಒಲಂಪಿಕ್ಸ್‌ನ ಮಹಿಳಾ ಗಾಲ್ಫ್ ಸ್ಪರ್ಧೆಯಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಅವರಿಗೆ ಪದಕ ಕೈತಪ್ಪಿದ್ದರೂ ಟೂರ್ನಿಯಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಒಲಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು ದಾಖಲೆ ಬರೆದಿದ್ದಾರೆ.

ಒಲಂಪಿಕ್ಸ್ ಇತಿಹಾಸದಲ್ಲಿ ಭಾರತದ ಗಾಲ್ಫ್ ಆಟಗಾರ್ತಿಯೊಬ್ಬರು ನಾಲ್ಕನೇ ಸ್ಥಾನಕ್ಕೇರಿರುವುದು ಇದೇ ಮೊದಲು. ಹೀಗಾಗಿ, ಬೆಂಗಳೂರಿನ ಅದಿತಿ ಒಲಿಂಪಿಕ್ಸ್‌ ಗಾಲ್ಫ್‌ನಲ್ಲಿ ಸೋತಿದ್ದರೂ, ಐತಿಹಾಸಿಕ ಸಾಧನೆ ಮಾಡಿದ್ದಾರೆ.

23 ವರ್ಷದ ಅದಿತಿ 2016ರ ರಿಯೋ ಆವೃತ್ತಿಯಲ್ಲಿ ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ್ದರು. ಆ ಕೂಟದಲ್ಲಿ 41 ನೇ ಸ್ಥಾನ ಪಡೆದಿದ್ದ ಅವರು, ಈ ಬಾರಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲ, ಅವರು ಕೂದಲೆಳೆ ಅಂತರದಲ್ಲಿ ಪದಕ ವಂಚಿತರಾದರು.

ಆರಂಭದ ಸುತ್ತಿನಿಂದಲೂ ಅಮೋಘ ಸಾಮರ್ಥ್ಯ ತೋರುತ್ತ ಮುನ್ನಡೆ ಸಾಧಿಸಿದ್ದ ಅದಿತಿಗೆ ಕೊನೆಯ ಸುತ್ತಿನಲ್ಲಿ ಅದೃಷ್ಟ ಕೈಕೊಟ್ಟಿತ್ತು.

Sampriya YK

Recent Posts

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

6 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

42 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

58 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

9 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

9 hours ago