ಕ್ರೀಡೆ

ಟಿ 20 ವಿಶ್ವಕಪ್‌ ನಲ್ಲಿ ಕಣಕ್ಕಿಳಿಯಲಿದೆ 16 ತಂಡಗಳು!

ಟಿ 20 ವಿಶ್ವಕಪ್‌ ಬಿ ಗುಂಪಿನ ಕ್ವಾಲಿಫಯರ್‌ ಸೆಮಿಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿದ ನೆದರ್‌ಲ್ಯಾಂಡ್ ಹಾಗೂ ಜಿಂಬಾಬ್ವೆ ತಂಡಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಪುರುಷರ T20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಜಿಂಬಾಬ್ವೆಯಲ್ಲಿ ನಡೆದ ಮೊದಲ ಸೆಮೀಸ್‌ನಲ್ಲಿ ನೆದರ್ಲ್ಯಾಂಡ್‌ ತಂಡವು ಏಳು ವಿಕಟ್‌ ಗಳಿಂದ ಅಮೆರಿಕಾ ತಂಡವನ್ನು ಸೋಲಿಸಿತು. ಮತ್ತೊಂದು ಪಂದ್ಯದಲ್ಲಿ ಜಿಂಬಾಂಬ್ವೆ ತಂಡವು ಪಪುವಾ ನ್ಯೂಗಿನಿ ತಂಡವನ್ನು 27 ರನ್‌ ಗಳಿಂದ ಸದೆ ಬಡಿಯುವ ಮೂಲಕ ವಿಶ್ವಕಪ್‌ ಗೆ ಟಿಕೆಟ್‌ ಗಿಟ್ಟಿಸಿಕೊಂಡಿದೆ.

ಇದೇ ಮೊದಲ ಬಾರಿಗೆ ಟಿ.20 ವಿಶ್ವಕಪ್‌ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿದೆ. ಅಕ್ಟೋಬರ್ 16 ರಿಂದ ನವೆಂಬರ್ 13 ರ ವರೆಗೆ  ಏಳು ಆತಿಥೇಯ ನಗರಗಳಲ್ಲಿ ವಿಶ್ವಕಪ್‌ ಪಂದ್ಯಗಳು ನಡೆಯಲಿವೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಅ.23ರಂದು ಸೆಣಸಾಟ ನಡೆಸುವ ಮೂಲಕ ಅಭಿಯಾನ ಆರಂಭಿಸಲಿದೆ. ಅರ್ಹತೆ ಪಡೆದ ತಂಡಗಳನ್ನು A ಹಾಗೂ B ಎಂದು ವರ್ಗೀಕರಿಸಲಾಗಿದ್ದು, ಅಂತಿಮ ಗುಂಪುಗಳನ್ನು ಭಾನುವಾರ ಘೋಷಿಸಲಾಗುತ್ತದೆ.

ಆತಿಥೇಯ ಆಸ್ಟ್ರೇಲಿಯಾ, ಭಾರತ (01-ಟಿ.20 ರ‍್ಯಾಂಕಿಂಗ್‌- 270 ಪಾಯಿಂಟ್ಸ್) ಇಂಗ್ಲೆಂಡ್ (264), ಪಾಕಿಸ್ತಾನ (261), ದಕ್ಷಿಣ ಆಫ್ರಿಕಾ (255), ನ್ಯೂಜಿಲೆಂಡ್ (250), ವೆಸ್ಟ್ ಇಂಡೀಸ್ (242), ಶ್ರೀಲಂಕಾ (231), ಬಾಂಗ್ಲಾದೇಶ (230), ಅಫ್ಘಾನಿಸ್ತಾನ (228)  ವಿಶ್ವಕಪ್‌ ಗೆ ನೇರ ಅರ್ಹತೆ ಪಡೆದಿವೆ.

2021 ರ ವಿಶ್ವಕಪ್‌ ಸೂಪರ್ 12 ಹಂತಕ್ಕೆ ಪ್ರವೇಶಿಸಿದ ತಂಡಗಳಾದ  ನಮೀಬಿಯಾ, ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಐರ್ಲೆಂಡ್‌, ಸ್ಕಾಟ್‌ ಲ್ಯಾಂಡ್‌ ತಂಡಗಳು ಸ್ವಯಂ ಅರ್ಹತೆ ಪಡೆದಿವೆ. ಇದೀಗ ನೆದರ್ಲ್ಯಾಂಡ್‌ ಹಾಗೂ ಜಿಂಬಾಬ್ವೆ ತಂಡಗಳು ಅರ್ಹತಾ ಸುತ್ತಿನಿಂದ ಆಯ್ಕೆಯಾಗಿವೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

49 mins ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

2 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

2 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

3 hours ago