ಕೊಲಂಬೊ: ಲಂಕಾ ಪ್ರೀಮಿಯರ್ ಲೀಗ್ ಸಮಯದಲ್ಲಿ ಆಟಗಾರನಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಭಾರತದ ಮಾಜಿ ಅಂಡರ್ -19 ವಿಶ್ವಕಪ್ ವಿಜೇತ ಮಂಜೋತ್ ಕಲ್ರಾ ಅರೆಸ್ಟ್ ಆಗಿದ್ದಾರೆ. ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ವಿರೋಧಿ ತನಿಖಾಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
2018 ರ ಐಸಿಸಿ ಅಂಡರ್ -19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಶತಕ ಸಿಡಿಸಿದ ಕಲ್ರಾ ಅವರನ್ನು ಕ್ರೀಡೆಗೆ ಸಂಬಂಧಿಸಿದ ಅಪರಾಧಗಳ ಹಿನ್ನೆಲೆ ಪೊಲೀಸ್ ವಿಶೇಷ ತನಿಖಾ ಘಟಕವು ವಶಕ್ಕೆ ಪಡೆದುಕೊಂಡಿತು. ನಂತರ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.
ಲಂಕಾ ಪ್ರೀಮಿಯರ್ ಲೀಗ್‌ಗೆ ಸಂಬಂಧಿಸಿದಂತೆ ಆಟಗಾರನೊಬ್ಬನಿಗೆ ಹಣದ ಆಮಿಷ ಒಡ್ಡಿದ ಆರೋಪ ಕಲ್ರಾ ಮೇಲಿದೆ ಎಂದು ಶ್ರೀಲಂಕಾ ಪೊಲೀಸರು ತಿಳಿಸಿದ್ದಾರೆ. ಪಂದ್ಯಾವಳಿ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಬಂಧನ ನಡೆದಿದೆ.

