ಬೆಂಗಳೂರು: ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂದ್ಯ ಮುಗಿದ ಬಳಿಕ ಕ್ರಿಕೆಟ್ ಪ್ರೇಮಿಗಳು ಹೊರಗೆ ಬರುವ ವೇಳೆ ಕಳ್ಳರು ಮೊಬೈಲ್ ಹಾಗೂ ಪರ್ಸ್‌ಗಳನ್ನು ಕಳವು ಮಾಡಿದ್ದಾರೆ. ಮೊಬೈಲ್ ಕಳೆದುಕೊಂಡ ಕೆಲವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮತ್ತೆ ಕೆಲವರು ಇ-ಲಾಸ್ಟ್ ಮೂಲಕ ದೂರು ಸಲ್ಲಿಸಿದ್ದಾರೆ.
ಗೇಟ್ ನಂ 1, 2 ಮತ್ತು 3 ರಲ್ಲಿ ಅತಿ ಹೆಚ್ಚು ಕಳ್ಳತನವಾಗಿದೆ. ಠಾಣೆಯಲ್ಲಿ 8 ಮಂದಿ ದೂರು ಸಲ್ಲಿಸಿದ್ದು, ಇ-ಲಾಸ್ಟ್‌ನಲ್ಲಿ 12ಕ್ಕೂ ಹೆಚ್ಚು ದೂರು ಸಲ್ಲಿಕೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

