ನವದೆಹಲಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಭಾರತದ ಈಶಾನ್ಯ ರಾಜ್ಯಗಳ ಕುರಿತು ಬಾಂಗ್ಲಾ ಪ್ರಧಾನಿ ಯೂನಸ್ ಖಾನ್ ಕೊಟ್ಟ ಹೇಳಿಕೆಗಳು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಈ ಮಧ್ಯೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಮಾತ್ರ 2026ರ ತನ್ನ ಕ್ರಿಕೆಟ್ ಕ್ಯಾಲೆಂಡರ್ ಬಿಡುಗಡೆ ಮಾಡಿದೆ.

ಈ ಕ್ಯಾಲೆಂಡರ್ ನಲ್ಲಿ ಭಾರತ ಹಾಗೂ ಬಾಂಗ್ಲಾ ನಡುವಿನ ಮೂರು ಏಕದಿನ ಪಂದ್ಯಗಳು ಮತ್ತು 2026ರ ಆಗಸ್ಟ್-ಸೆಪ್ಟೆಂಬರ್‌’ನಲ್ಲಿ T20I ಪಂದ್ಯಗಳನ್ನು ಉಲ್ಲೇಖಿಸಲಾಗಿದೆ.

ಭಾರತದಲ್ಲಿ ಈಗಾಗಲೇ ಬಾಂಗ್ಲಾದೇಶದ ವಿರುದ್ಧ ಅಸಹನೆ ಹೆಚ್ಚಾಗಿದೆ. ಬಾಂಗ್ಲಾ ಆಟಗಾರ ಮುಸ್ತಾಫಿಜುರ್ ರೆಹಮಾನ್ ನನ್ನು ತಂಡಕ್ಕೆ ಆಯ್ಕೆ ಮಾಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ವ್ಯಾಪಕವಾಗಿ ಟೀಕಿಸಲಾಗಿದೆ.

ಹೀಗಾಗಿ ಈ ಯಾವುದೇ ಸೂಕ್ಷ್ಮ ವಿಚಾರಗಳ ಬಗ್ಗೆ ಬಿಸಿಸಿಐ ಇದುವರೆಗೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಈ ಹಿಂದೆ ಬಾಂಗ್ಲಾದೇಶದ ಭಾರತದ ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಬಿಸಿಸಿಐ ಕಳವಳ ವ್ಯಕ್ತಪಡಿಸಿತ್ತು. ಇದೀಗ ಬಾಂಗ್ಲಾದೇಶದ ಎ ಕ್ರಿಕೆಟ್ ಕ್ಯಾಲೆಂಡರ್ ಬಗ್ಗೆ ಬಿಸಿಸಿಐ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.