News Karnataka Kannada
Monday, May 06 2024
ಕ್ರೀಡೆ

2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೆ ಐಸಿಸಿ ಅರ್ಜಿ ಸಲ್ಲಿಕೆ

Cricket Ball 10082021
Photo Credit :

ದುಬೈ: 2028ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಅರ್ಜಿ ಸಲ್ಲಿಕೆ ಮಾಡುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಂಗಳವಾರ ಖಚಿತ ಪಡಿಸಿದೆ.

ಒಲಂಪಿಕ್ಸ್ ಗೆ ಕ್ರಿಕೆಟ್ ಸೇರಿಸುವ ಕುರಿತು ಸಾಕಷ್ಚು ವರ್ಷಗಳಿಂದ ಚರ್ಚೆಯಾಗುತ್ತಿದೆಯಾದರೂ ಇದೇ ಮೊದಲ ಬಾರಿಗೆ ಐಸಿಸಿ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರಿಸುವ ಕುರಿತು ಅಧಿಕೃತವಾಗಿ ಮನವಿ ಮಾಡುವುದಾಗಿ ಹೇಳಿದೆ.

ಈಗಾಗಲೇ ಐಸಿಸಿ ಸಹ ಒಲಿಂಪಿಕ್ ವರ್ಕಿಂಗ್ ಗ್ರೂಪ್ ಅನ್ನು ರಚಿಸಿದ್ದು, ಇದು 2028 ರಿಂದ ಆರಂಭವಾಗುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನೂ ಕೂಡ ಭಾಗವಾಗಿಸುವ ಕೆಲಸ ಮಾಡುತ್ತಿದೆ ಎನ್ನಲಾಗಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಇಯಾನ್ ವಾಟ್ಮೋರ್ ಐಸಿಸಿ ಒಲಿಂಪಿಕ್ ವರ್ಕಿಂಗ್ ಗ್ರೂಪ್ ನ ಅಧ್ಯಕ್ಷರಾಗಿರುತ್ತಾರೆ ಮತ್ತು ಐಸಿಸಿ ಸ್ವತಂತ್ರ ನಿರ್ದೇಶಕ ಇಂದ್ರ ನೂಯಿ ಅವರ ಜೊತೆ ಸೇರಿಕೊಳ್ಳಲಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರು, ‘ಈ ಬಿಡ್‌ನ ಹಿಂದೆ ನಮ್ಮ ಕ್ರೀಡೆ ಒಗ್ಗಟ್ಟಾಗಿದೆ, ಮತ್ತು ನಾವು ಒಲಿಂಪಿಕ್ಸ್ ಅನ್ನು ಕ್ರಿಕೆಟ್ ನ ದೀರ್ಘಾವಧಿಯ ಭವಿಷ್ಯದ ಭಾಗವಾಗಿ ನೋಡುತ್ತೇವೆ. ನಾವು ಜಾಗತಿಕವಾಗಿ ಒಂದು ಶತಕೋಟಿಗೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದೇವೆ ಮತ್ತು ಅವರಲ್ಲಿ 90 ಪ್ರತಿಶತದಷ್ಟು ಜನರು ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ನೋಡಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು