ಮಹಾರಾಷ್ಟ್ರ: ಇಂಡಿಯನ್ ಪ್ರೀಮಿಯರ್ ಲೀಗ್ 2023ರಲ್ಲಿ ಆರ್ ಸಿ ಬಿ ಮ್ಯಾಚ್ ವೇಳೆ ವಿರಾಟ್ ಕೊಹ್ಲಿ ಜೊತೆ ಜಗಳವಾಡಿದ್ದ ಲಖನೌ ಸೂಪರ್ ಜೇಂಟ್ಸ್ ತಂಡದ, ಅಫ್ಘಾನಿಸ್ತಾನ ಸ್ಟಾರ್ ವೇಗಿ ನವೀನ್-ಉಲ್-ಹಕ್ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್ 2023 ರ ಬಳಿಕ ತಾನು 50-ಓವರ್ ಮಾದರಿಯ ಕ್ರಿಕೆಟ್ನಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ತನ್ನ 23ನೇ ವರ್ಷಕ್ಕೆ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ನವೀನ್ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವುದಾಗಿ ಹೇಳಿದ್ದಾರೆ.
ಇತ್ತೀಚೆಗಷ್ಟೆ ಮೊಣಕಾಲಿನ ಗಾಯದಿಂದಾಗಿ ನವೀನ್ ಅವರು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಕಳೆದುಕೊಂಡಿದ್ದರು. ಸದ್ಯ ವೈದ್ಯರ ಸಲಹೆಯ ಮೇರೆಗೆ ಏಕದಿನ ಕ್ರಿಕೆಟ್ನಿಂದ ದೂರ ಉಳಿಯಲು ತೀರ್ಮಾನಿಸಿದ್ದೇನೆ ಎಂದು ತಮ್ಮ ಅಧಿಕೃತ ಇನ್ಸ್ಟಾಗ್ರಾಮನ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.