ಟೀಮ್ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯ ಸೆಪ್ಟೆಂಬರ್ 27ನೇ ತಾರೀಕಿನಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ.
ಬಾಂಗ್ಲಾ ಎದುರಿನ 2ನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದರೆ, ಕೆಲ ಆಟಗಾರರಿಗೆ ಜಾಕ್ಪಾಟ್ ಹೊಡೆದಿದೆ. ರೋಹಿತ್ ಶರ್ಮಾ ನಾಯಕತ್ವದ 16 ಸದಸ್ಯರ ಬಲಿಷ್ಠ ತಂಡವನ್ನೇ ಸೆಲೆಕ್ಷನ್ ಕಮಿಟಿ ಪ್ರಕಟಿಸಿದೆ.
16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ದಾರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ಕೋಟಾದದಲ್ಲಿ ಆರ್.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ,
ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ. ವಿಶೇಷ ಅಂದರೆ ಆರ್ಸಿಬಿ ತಂಡದ ಭಾಗವಾಗಿರುವ ನಾಲ್ಕು ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ಯಶ್ ದಯಾಳ್ಗೆ ಅವಕಾಶ ನೀಡಲಾಗಿದೆ.