ಗುಜರಾತ್: ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಈಗಾಗಲೇ ಶುರುವಾಗಿದ್ದು, ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವ ಕೆಎಲ್ ರಾಹುಲ್ ಸ್ಥಾನದಲ್ಲಿ ಸರ್ಫರಾಝ್ ಸ್ಥಾನ ಪಡೆದರೆ, ಕೆಎಸ್ ಭರತ್ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೇಲ್ ಕಣಕ್ಕಿಳಿದಿದ್ದಾರೆ.
ಹಾಗೆಯೇ ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಅ್ಯಂಡರ್ಸನ್.