ಮಂಗಳೂರು : ಒಲಂಪಿಕ್ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದ ಅವರು, ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳೆಸಿ ಎಂದು ಸಿಎಂ ಕರೆ ನೀಡಿದ್ದಾರೆ.
ಕ್ರೀಡಾಪಟುಗಳು, ಕೋಚ್ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿದರೂ ಕೊಡುತ್ತೇವೆ. ಆದರೆ ಒಲಂಪಿಕ್ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ಗೆದ್ದು ತರಬೇಕು ಎಂದು ಹರಿದುಂಬಿಸಿದ್ದಾರೆ.
ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.