ವರ್ಲ್ಡ್ ಯುನಿವರ್ಸಿಟಿ ಗೇಮ್ ಗೆ ಆಳ್ವಾಸ್‌ನ 8 ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ಜುಲೈ 28ರಿಂದ ಆಗಸ್ಟ್ 8ರವರೆಗೆ ಚೀನಾದ ಚಾಂಗುನಲ್ಲಿ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2021 (ವಿಶ್ವ ವಿಶ್ವವಿದ್ಯಾಲಯ ವರೆಗೆ ಕ್ರೀಡಾಕೂಟ-2021)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 8 ಕ್ರೀಡಾಪಟುಗಳು ಆಯ್ಕೆಯಾಗಿದ್ದು ಇದರೊಂದಿಗೆ ಈ ವರೆಗೆ ಆಳ್ವಾಸ್ ನ ಒಟ್ಟು 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪುರುಷರ ವಿಭಾಗದಲ್ಲಿ ತೀರ್ಥೇಶ್ ಶೆಟ್ಟಿ (400 ಮೀಟರ್ಸ್ ಓಟ ಮತ್ತು 4 x 400 ಮೀಟರ್ಸ್‌ ರಿಲೇ), ಹರ್‌ದೀಪ್‌ (20 ಕಿ.ಮೀ ನಡಿಗೆ), ಸ್ಟಾಲಿನ್ ಜೋಸ್‌ ಎಸ್‌. (ಡ್‌ರಾಫ್ಲಾನ್‌), ಮಹಿಳಾ ವಿಭಾಗದಲ್ಲಿ ಪೂನಮ್ ಡಿಂಕೆ ಸೋಮನೆ (5 ಸಾವಿರ ಮೀಟರ್ಸ್‌ ಮತ್ತು 10 ಸಾವಿರ ಮೀಟರ್ಸ್ ಓಟ) ಬಸಂತಿ ಕುಮಾರಿ (10 ಸಾವಿರ ನಿರ್ಮಾ (ಹಾಫ್ ಮ್ಯಾರಥಾನ್), ಸಿಂಚನಾ ಎಂ.ಎಸ್. (ಹೈಜಂಪ್), ಭವಾನಿ ಯಾದವ್ ಭಾಗಬತಿ (ಲಾಂಗ್ ಜಂಪ್ ಮತ್ತು 4×400 ಮೀಟರ್ಸ್‌ ರಿಲೇ) ಪಾಲ್ಗೊಳ್ಳಲಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ ಕ್ರೀಡಾಪಟುಗಳು ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಪ್ ಇಂಡಸ್ಟ್ರಿಯಲ್ ಟೆಕ್ನಾಲಜಿ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ (ಸಿಲೆಕ್ಷನ್ ಟ್ರಯಲ್ಸ್ ಗೇಮ್) ಪ್ರವೇಶ ಪಡೆದಿದ್ದಾರೆ.

ಈ ಹಿಂದೆ ನಡೆದ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌ಗಳಲ್ಲೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಪ್ರತಿನಿಧಿಸಿದ್ದು, ಈ ವರ್ಷ ಸೇರಿದಂತೆ ಈ ವರೆಗೆ 21 ಮಂದಿ ಆಯ್ಕೆಯಾಗಿದ್ದಾರೆ.

2016ರಲ್ಲಿ ಕೊವೇಶಿಯಾ ನಡೆದ ಗೇಮ್ಸ್‌ನಲ್ಲಿ ಒಬ್ಬರು, 2017ರಲ್ಲಿ ತೈವಾನ್ ನಡೆದ ಗೇಮ್ಸ್‌ನಲ್ಲಿ ಇಬ್ಬರು, 2019ರಲ್ಲಿ ಇಟಲಿಯಲ್ಲಿ ನಡೆದ ಗೇಮ್ಸ್‌ನಲ್ಲಿ 10 ಜನ ಪಾಲ್ಗೊಂಡಿದ್ದರು ಎಂದು ತಿಳಿಸಿದರು.

Gayathri SG

Recent Posts

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

7 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

34 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

47 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago