ಮಹಿಳಾ ಟಿ-20 ವಿಶ್ವಕಪ್ನಲ್ಲಿ ಭಾರತಕ್ಕೆ ಹೀನಾಯ ಸೋಲಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲೆಂಡ್ ತಂಡವನ್ನು ಹರ್ಮನ್ ಪ್ರೀತ್ ಕೌರ್ ಪಡೆ ಎದುರಿಸಿತ್ತು. ಟಾಸ್ ಗೆದ್ದು ಬ್ಯಾಟ್ ಮಾಡಿದ ನ್ಯೂಜಿಲೆಂಡ್, 20 ಓವರ್ನಲ್ಲಿ 4 ವಿಕೆಟ್ ಕಳೆದುಕೊಂಡು 160 ರನ್ಗಳಿಸಿತ್ತು.
ಈ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ 19 ಓವರ್ಗೆ ಎಲ್ಲಾ ವಿಕೆಟ್ ಕಳೆದುಕೊಂಡು 102 ರನ್ಗಳಿಸಿ 58 ರನ್ಗಳ ಅಂತರದಿಂದ ಸೋಲಿಗೆ ಶರಣಾಯ್ತು. ಟೀಂ ಇಂಡಿಯಾ ಪರ ಸ್ಮೃತಿ ಮಂದಾನ 12, ಕ್ಯಾಪ್ಟನ್ ಕೌರ್ 15, ಜೆಮೈ ರೋಡ್ರಿಗೆಸ್ 13, ರಿಚಾ ಘೋಷ್ 12, ದೀಪ್ತಿ ಶರ್ಮಾ 13 ರನ್ಗಳಿಸಿದರು.
ಟಾಪ್ ಆರ್ಡರ್ ಬ್ಯಾಟರ್ಸ್ ವೈಫಲ್ಯದಿಂದ ಭಾರತ ತಂಡ ಮೊದಲ ಪಂದ್ಯವನ್ನು ಸೋಲಬೇಕಾಯಿತು. ರೇಣುಕಾ ಸಿಂಗ್ 2 ವಿಕೆಟ್ ಪಡೆದುಕೊಂಡರು. ಅರುಂಧತಿ ರೆಡ್ಡಿ ಹಾಗೂ ಶೋಭನಾ ತಲಾ ಒಂದು ವಿಕೆಟ್ ಪಡೆದುಕೊಂಡರು. ಶ್ರೇಯಾಂಕಾ ಪಾಟೀಲ್ ಯಾವುದೇ ವಿಕೆಟ್ ಪಡೆದುಕೊಂಡಿರಲಿಲ್ಲ. ನಾಳೆ ಪಾಕಿಸ್ತಾನದ ವಿರುದ್ಧ ಪಂದ್ಯ ನಡೆಯಲಿದೆ.

