ಪಾಕ್: ಪಾಕಿಸ್ತಾನದ ಮಾಜಿ ಕ್ರಿಕೆಟರ್ ಅಬ್ದುಲ್ ರಜಾಕ್ ಬಾಲಿವುಡ್ ನಟಿ ಐಶ್ವರ್ಯಾ ರೈ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಬಳಿಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಅಬ್ದುಲ್ ರಜಾಕ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಒಂದರಲ್ಲಿ ಪಾಕಿಸ್ತಾನ ತಂಡವನ್ನು ಟೀಕಿಸುವ ಬರದಲ್ಲಿ ನಟಿ ಐಶ್ವರ್ಯಾ ರೈ ಹೆಸರು ಬಳಿಸಿ ಅವಹೇಳನಕಾರಿ ಹೇಳಿಕೆ ನೀಡಿದ್ದರು, ಇದು ಸಾಮಾಜಿಕ ಜಾಲಾತಾಣದಲ್ಲಿ ಮತ್ತು ಕ್ರಿಕೆಟ್ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.
ಅಬ್ಬುಲ್ ರಜಾಕ್ ಐಸಿಸಿ ವಿಶ್ವಕಪ್ 2023 ರಿಂದ ಪಾಕ್ ತಂಡವು ಬೇಗನೆ ನಿರ್ಗಮಿಸಿದ ಕುರಿತು ಮಾತನಾಡುತ್ತಿದ್ದರು. ಈ ವೇಳೆ ‘‘ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈಯನ್ನು ಮದುವೆಯಾಗಿರುತ್ತಿದ್ದರೆ ಉತ್ತಮ ಮಕ್ಕಳು ಹುಟ್ಟುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಳ್ಳಬಾರದು’’ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಆದರೀಗ ರಜಾಕ್ ಹೇಳಿಕೆಗೆ ಎಲ್ಲೆಡೆ ಆಕ್ರೊಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ಷಮೆಯಾಚಿಸಿದ್ದಾರೆ.