Categories: ಕ್ರೀಡೆ

ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಜೆರ್ಸಿ ಅನಾವರಣ

ದೆಹಲಿ: ದಶಕದ ಬಳಿಕ ಐಸಿಸಿ ಟ್ರೋಫಿಗೆ ಮುತ್ತಿಕ್ಕಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಕನಸು ಕಾಣುತ್ತಿದೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದ್ದು, ಮುಂಬರುವ ಅಕ್ಟೋಬರ್ 05ರಿಂದ ನವೆಂಬರ್ 19ರವರೆಗೆ ವಿಶ್ವಕಪ್ ಟೂರ್ನಿಯು ಭಾರತದ 10 ವಿವಿಧ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದೀಗ ಟೀಂ ಇಂಡಿಯಾಗೆ ಜೆರ್ಸಿ ಪ್ರಾಯೋಜಕತ್ವ ನೀಡುವ ಆ್ಯಡಿ​ಡಾ​ಸ್‌, ಬುಧವಾರವಾದ ಇಂದು(ಸೆ.20), ಟೀಂ ಇಂಡಿಯಾ ಜೆರ್ಸಿ ಅನಾವರಣ ಮಾಡಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಸರಿಯಾಗಿ 15 ದಿನಗಳು ಬಾಕಿ ಇರುವಾಗಲೇ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಜೆರ್ಸಿ ಅನಾವರಣವಾಗಿದ್ದು, ನೂತನ ಜೆರ್ಸಿಯಲ್ಲಿ ಎರಡು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಇಲ್ಲಿ ಮುಖ್ಯವಾಗಿ ಭುಜದ ಮೇಲೆ ಈ ಮೊದಲು 3 ಬಿಳಿ ಗೆರೆಗಳಿದ್ದವು, ಇದೀಗ ವಿಶ್ವಕಪ್ ಟೂರ್ನಿಯ ಜೆರ್ಸಿಯಲ್ಲಿ ಆ ಮೂರು ಬಿಳಿ ಗೆರೆಗಳ ಬದಲಿಗೆ ತ್ರಿವರ್ಣ ಬಣ್ಣವಾಗಿರುವ ಕೇಸರಿ, ಬಿಳಿ ಹಾಗೂ ಹಸಿರಿನ ಗೆರೆಗಳನ್ನು ಅಳವಡಿಸಲಾಗಿದೆ. ಇದು ಭಾರತದ ಧ್ವಜವನ್ನು ಪ್ರತಿಬಿಂಬಿಸುತ್ತದೆ.

ಎರಡನೆಯದ್ದು, ಆಟಗಾರರ ಎದೆಯ ಭಾಗದಲ್ಲಿ ಬಿಸಿಸಿಐ ಲೋಗೋದ ಮೇಲ್ಬಾಗದಲ್ಲಿ 2 ಸ್ಟಾರ್‌ಗಳನ್ನು ಅಳವಡಿಸಲಾಗಿದೆ. ಇದು ಭಾರತ ಗೆದ್ದ ಎರಡು ಏಕದಿನ ವಿಶ್ವಕಪ್ ಅನ್ನು ಪ್ರತಿಬಿಂಬಿಸುತ್ತದೆ. ಈ ಮೊದಲು ಬಿಸಿಸಿಐ ಲೋಗೋದ ಮೇಲೆ ಮೂರು ಸ್ಟಾರ್‌ಗಳಿದ್ದವು. ನಂಬಿಕೆಗಳು ಬೇರೂರಿವೆ, ಯಾವುದೂ ಅಸಾಧ್ಯವಲ್ಲ ಎನ್ನುವ ಸಂದೇಶವನ್ನು ಆ್ಯಡಿ​ಡಾ​ಸ್‌ ವಿಡಿಯೋದಲ್ಲಿ ಸಾರಿ ಹೇಳಿದೆ.

ಆ್ಯಡಿ​ಡಾ​ಸ್‌ ನ ಈ ವಿಡಿಯೋದಲ್ಲಿ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡದ ನೂತನ ಜೆರ್ಸಿ ಅನಾವರಣವಾಗಿದೆ. ರ‍್ಯಾಪರ್ ರಫ್ತಾರ್ ಅವರು ಹಾಡಿರುವ ‘3 ಕ ಡ್ರೀಮ್'(೩ನೇ ಟ್ರೋಫಿ ಕನಸು)ನ ವಿಡಿಯೋವೀಗ ಸಾಕಷ್ಟು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

 

Ashitha S

Recent Posts

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

2 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

26 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

36 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

48 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago