Ad

ಆಸ್ಟ್ರೇಲಿಯಾ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಅಫ್ಘಾನಿಸ್ತಾನ್

ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ 21 ರನ್​ಗಳ ಗೆಲುವು ದಾಖಲಿಸುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ.

ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ 21 ರನ್​ಗಳ ಗೆಲುವು ದಾಖಲಿಸುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ.

Ad
300x250 2

ಕಿಂಗ್‌ಸ್ಟೌನ್​ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಭರ್ಜರಿ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 118 ರನ್ ಪೇರಿಸಿದ ಈ ಜೋಡಿ ಅಫ್ಘಾನ್ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು. ಇದರ ನಡುವೆ 49 ಎಸೆತಗಳಲ್ಲಿ 60 ರನ್ ಬಾರಿಸಿ ರಹಮಾನುಲ್ಲಾ ಗುರ್ಬಾಝ್ ಔಟಾದರೆ, ಇದರ ಬೆನ್ನಲ್ಲೇ 51 ರನ್ ಬಾರಿಸಿದ್ದ ಇಬ್ರಾಹಿಂ ಝದ್ರಾನ್ ಕೂಡ ವಿಕೆಟ್ ಒಪ್ಪಿಸಿದರು.

ಆರಂಭಿಕರಿಬ್ಬರ ಪತನದೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಆಸ್ಟ್ರೇಲಿಯಾ ಬೌಲರ್​ಗಳು ಅಫ್ಘಾನಿಸ್ತಾನ್ ತಂಡದ ರನ್ ಗತಿಯನ್ನು ನಿಯಂತ್ರಿಸಿದರು. ಇದರ ನಡುವೆ ಒತ್ತಡಕ್ಕೆ ಒಳಗಾದ ಅಫ್ಘಾನಿಸ್ತಾನ್ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಅಫ್ಘಾನಿಸ್ತಾನ್ 148 ರನ್ ಕಲೆಹಾಕಿತು.

Ad
Ad
Nk Channel Final 21 09 2023
Ad