Ad

ಅಫ್ಘಾನಿಸ್ತಾನದ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆಫ್ರಿಕಾ

ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಿ20 ವಿಶ್ವಕಪ್‌ನಲ್ಲಿ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿದೆ.

ಟ್ರಿನಿಡಾಡ್: ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಿ20 ವಿಶ್ವಕಪ್‌ನಲ್ಲಿ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿದೆ.

Ad
300x250 2

ಗುರುವಾರ ಬೆಳಗ್ಗೆ ಬ್ರಯನ್‌ ಲಾರಾ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 11.5 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 56 ರನ್‌ ಪೇರಿಸಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 8.5 ಓವರ್‌ನಲ್ಲೇ ಒಂದು ವಿಕೆಟ್‌ ನಷ್ಟಕ್ಕೆ 60 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ದಕ್ಷಿಣ ಆಫ್ರಿಕಾ 8 ಓವರ್‌ನಲ್ಲೇ ಗೆಲುವಿನ ದಡ ಸೇರಿತು. ಆರಂಭಿಕ ಬ್ಯಾಟರ್‌ ಕ್ವಿಂಟನ್‌ ಡಿಕಾಕ್‌ ಕೇವಲ 5 ರನ್‌ ಗಳಿಸಿ ತಂಡಕ್ಕೆ ಅಘಾತ ನೀಡಿದ್ದರು. ಆದರೆ ರೀಜಾ ಹೆಂಡ್ರಿಕ್ಸ್ (29) ಹಾಗೂ ಐಡೆನ್ ಮಾರ್ಕ್ರಾಮ್ (23) ಜೊತೆಯಾಟದಿಂದ ತಂಡ ಗೆದ್ದಿದೆ.

Ad
Ad
Nk Channel Final 21 09 2023
Ad